More

    ಬಿಸಿಲಿನ ತಾಪಕ್ಕೆ ಹಾವೇರಿ ನಗರದ ವ್ಯಕ್ತಿ ಬಲಿ ?

    ಹಾವೇರಿ: ನಗರದಲ್ಲಿ ಶುಕ್ರವಾರ ನ್ಯಾಯಬೆಲೆ ಅಂಗಡಿಯಿಂದ ಮನೆಗೆ ಮರಳುವಾಗ ಬಿಸಿಲಿನ ತಾಪಕ್ಕೆ ತೀವ್ರವಾಗಿ ಆಯಾಸಗೊಂಡು ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
    ನಗರದ ಕೂಲಿಯವರ ಓಣಿ ನಿವಾಸಿ ರಾಜಶೇಖರ ಲಿಂಗಪ್ಪ ಹಲಗಲಿ (56) ಮೃತಪಟ್ಟವರು. ಬೆಳಗ್ಗೆ 11.30ರ ಸುಮಾರು ನ್ಯಾಯಬೆಲೆ ಅಂಗಡಿಯಿಂದ ಪಡಿತರ ತೆಗೆದುಕೊಂಡು ಚೀಲವನ್ನು ಹೆಗಲ ಮೇಲೆ ಇಟ್ಟುಕೊಂಡು ಮನೆ ಕಡೆಗೆ ಬರುತ್ತಿದ್ದರು. ಈ ವೇಳೆ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ತೀವ್ರವಾಗಿ ಅಸ್ವಸ್ಥಗೊಂಡು ಕುಸಿದು ರಸ್ತೆ ಮೇಲೆ ಬಿದ್ದಿದ್ದಾರೆ. ಸ್ಥಳೀಯರು ಕೂಡಲೇ ಇವರ ನೆರವಿಗೆ ಧಾವಿಸಿ ಆಂಬುಲೆನ್ಸ್‌ಗೆ ಕರೆ ಮಾಡಿದ್ದರು. ಆಂಬುಲೆನ್ಸ್ ತಡವಾದ ಹಿನ್ನೆಲೆಯಲ್ಲಿ ಆಟೋದಲ್ಲಿ ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಇದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts