More

  ಆರ್ಥಿಕ ಭದ್ರತಾ ಯೋಜನೆ ಮತ್ತು ಆರ್ಥಿಕ ಸಾಕ್ಷರತಾ ಕಾರ್ಯಕ್ರಮ

  ಹಾವೇರಿ: ಇಲ್ಲಿನ ದೇವಗಿರಿಯ ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಗುರುವಾರ ಜಿಲ್ಲಾ ಅಗ್ರಣೀಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಹಾಗೂ ದೇವಗಿರಿ ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ಸಹಯೋಗದಲ್ಲಿ ಆರ್ಥಿಕ ಭದ್ರತಾ ಯೋಜನೆ ಮತ್ತು ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ಜರುಗಿತು.
  ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷತಾ ಬಿಮಾ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆಯ ಸಮಗ್ರ ಮಾಹಿತಿ ನೀಡಲಾಯಿತು.
  ಬ್ಯಾಂಕ್ ಆಫ್ ಬರೋಡ ಶಿವಮೊಗ್ಗ ಪ್ರಾದೇಶಿಕ ವ್ಯಸ್ಥಾಪಕ ರವಿ ಎಚ್.ಜಿ., ಜಿಲ್ಲಾ ಪಂಚಾಯಿತಿ ಡಿಆರ್‌ಡಿಎ ಯೋಜನಾ ನಿರ್ದೇಶಕ ಎಸ್.ಜೆ.ಕೊರವರ, ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಅಣ್ಣಯ್ಯ, ಜಿಲ್ಲಾ ಪಂಚಾಯಿತಿ ಯೋಜನಾ ವ್ಯವಸ್ಥಾಪಕ ನಾಗರಾಜ ಬಾರ್ಕಿ, ಉಪನ್ಯಾಸಕ ಸಂದೀಪ ಕುಲಕರ್ಣಿ, ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಅಬ್ದುಲ್ ರಫೀಕ್, ಇತರರು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts