More

    ದೇವಗಿರಿ ಯಲ್ಲಾಪುರ ಶಾಲಾ ಕೊಠಡಿ ಉದ್ಘಾಟನೆ

    ಹಾವೇರಿ: ಸರ್ಕಾರ ವಿವಿಧ ಯೋಜನೆಗಳಡಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಈ ಮೂಲಕ ಉತ್ತಮ ಶಿಕ್ಷಣ ಪಡೆದುಕೊಂಡು ಶಾಲೆಗೆ ಮತ್ತು ಗ್ರಾಮಕ್ಕೆ ಉತ್ತಮ ಹೆಸರು ತರಬೇಕು ಎಂದು ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
    ತಾಲೂಕಿನ ದೇವಗಿರಿ ಯಲ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ 2022-23ನೇ ಸಾಲಿನ ರಾಜ್ಯ ವಲಯ ವಿವೇಕ ಯೋಜನೆ ಅಡಿ ನಿರ್ಮಿಸಿದ್ದ ಎರಡು ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಶಾಲೆಗೆ ಶೌಚಗೃಹ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ತುರ್ತಾಗಿ ಒದಗಿಸುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಒಗೆ ಸೂಚಿಸಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಹಾವೇರಿ ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸನಗೌಡ ಪಾಟೀಲ, ಉಪಾಧ್ಯಕ್ಷೆ ಶಿವಲೀಲಾ ತಿರಕಣ್ಣನವರ, ಎಸ್‌ಡಿಎಂಸಿ ಅಧ್ಯಕ್ಷ ಹಾಲಪ್ಪ ಭಂಡಾರಿ, ಉಪಾಧ್ಯಕ್ಷ ನಂದಪ್ಪ ಲಮಾಣಿ, ಗ್ರಾಮ ಪಂಚಾಯಿತಿ ಸದಸ್ಯರಾದ ಲಲಿತಾ ಲಮಾಣಿ, ಕುಬೇರಗೌಡ ಕರೆಗೌಡ್ರ, ಅಜ್ಜಪ್ಪ ಗೋಣೆಮ್ಮವರ, ವಿನಾಯಕ ಟಿ.ಎನ್., ಪಿಡಿಒ ಸುನಿತಾ ಗರಡಿ, ಶ್ರೀಕಾಂತ ದೊಡ್ಡಕುರುಬರ, ಮಾಲತೇಶ ತಿರಕಣ್ಣನವರ, ಗುಡ್ಡನಗೌಡ ಕರಿಗೌಡ್ರ, ಅಜಯ ದೊಡ್ಡಮನಿ, ಶಿವಪ್ಪ ಅರಗಂಜಿ, ಎ.ಪಿ.ಗಡ್ಡದ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
    ಮುಖ್ಯೋಪಾಧ್ಯಾಯ ಎ.ಪಿ.ಗಡ್ಡದ ಸ್ವಾಗತಿಸಿದರು. ಎಸ್.ಬಿ.ಬಾರ್ಕಿ ನಿರೂಪಿಸಿದರು. ಕೆ.ಸಿ.ಹಂಜಿ ವಂದಿಸಿದರು.

    ಕೆರೆ ತುಂಬಿಸಲು ಪ್ರಯತ್ನ
    ದೇವಗಿರಿ ಯಲ್ಲಾಪುರ ಗ್ರಾಮವು ಜಿಲ್ಲಾ ಕೇಂದ್ರ, ಜಿಲ್ಲಾಡಳಿತ, ವೈದ್ಯಕೀಯ ಕಾಲೇಜ್, ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಸೇರಿದಂತೆ ಜಿಲ್ಲೆಯ ಪ್ರಮುಖ ಆಡಳಿತ ಕೇಂದ್ರಗಳ ಭಾಗವಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಇನ್ನಷ್ಟು ಮೂಲ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಹೊಂದಲಿದೆ. ಗ್ರಾಮದ ಕೆರೆ ತುಂಬಿಸುವ ಯೋಜನೆಯ ಕುರಿತು ಗ್ರಾಮಸ್ಥರು ಮನವಿ ಸಲ್ಲಿಸಿದ್ದು, ಆ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರುದ್ರಪ್ಪ ಲಮಾಣಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts