More

    ಶುಶ್ರೂಷಾಧಿಕಾರಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

    ಹಾವೇರಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ನೇಮಕಾತಿಗೆ ಸಂಬಂಧಿಸಿದಂತೆ ಶುಶ್ರೂಷಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
    ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ, ಜಿಲ್ಲಾಸ್ಪತ್ರೆ ಕಚೇರಿಯ ಸೂಚನಾ ಫಲಕಗಳಲ್ಲಿ ಹಾಗೂ ಜಿಲ್ಲಾ ಜಾಲತಾಣ (ಡಿಡಿಡಿ.ಛ್ಟಿಜಿ.್ಞಜ್ಚಿ.ಜ್ಞಿ) ದಲ್ಲಿ ಪ್ರಕಟಿಸಲಾಗಿದೆ.
    ಆಕ್ಷೇಪಣೆಗೆ ಅವಕಾಶ: ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಅರ್ಹ ಅಭ್ಯರ್ಥಿಗಳು ಮಾ.23ರ ಸಂಜೆ 5 ಗಂಟೆ ಒಳಗಾಗಿ ಲಿಖಿತವಾಗಿ ಅಧ್ಯಕ್ಷರು, ಜಿಲ್ಲಾ ಆಯ್ಕೆ ಸಮಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾವೇರಿ, ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts