ಹಾವೇರಿ: ಫೆ.20ರಂದು ನಡೆಯಬೇಕಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಯ ದಿಶಾ ಸಭೆ ಅನಿವಾರ್ಯ ಕಾರಣಗಳಿಂದ ಫೆ.24ಕ್ಕೆ ಮುಂದೂಡಲಾಗಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಫೆ.24ರಂದು ದಿಶಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ತಿಳಿಸಿದ್ದಾರೆ.