ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡಬೇಕು: ಅಪರ ಜಿಲ್ಲಾಧಿಕಾರಿ

blank

ಹಾವೇರಿ: ಪ್ರಸ್ತುತ ದಿನಗಳಲ್ಲಿ ನಿತ್ಯದ ವ್ಯಾಪಾರ ವಹಿವಾಟಿನಲ್ಲಿ ಮೋಸ, ವಂಚನೆ ಹೆಚ್ಚಾಗಿ ಕಂಡುಬರುತ್ತಿದ್ದು, ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡುವ ಮೂಲಕ ಮೋಸ ಹೋಗಬಾರದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಲ್​. ನಾಗರಾಜ ಹೇಳಿದರು.
ನಗರದ ಜಿ.ಎಚ್​. ಕಾಲೇಜಿನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂ, ಆಹಾರ ಮತ್ತು ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಗ್ರಾಹಕರ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರು ವಸ್ತುಗಳ ಗುಣಮಟ್ಟ, ವಾರಂಟಿ, ಗ್ಯಾರಂಟಿ ಕುರಿತು ಪರಿಶೀಲಿಸಿ ಖರೀದಿಸಬೇಕು. ಖರೀದಿ ವಸ್ತುವಿಗೆ ಕಡ್ಡಾಯವಾಗಿ ರಶೀದಿ ಪಡೆದುಕೊಳ್ಳಬೇಕು. ಒಂದು ವೇಳೆ ವಸ್ತುಗಳಲ್ಲಿ ಲೋಪದೋಷ ಕಂಡುಬಂದಲ್ಲಿ ವಸ್ತುಗಳ ಬದಲಾವಣೆ ಹಾಗೂ ಪರಿಹಾರ ಪಡೆಯಲು ಸಹಾಯವಾಗುತ್ತದೆ ಎಂದರು.
ಹಿರಿಯ ದಿವಾಣಿ ನ್ಯಾಯಾಧೀಶ ಬಿ.ಆರ್​. ಮುತಾಲಿಕದೇಸಾಯಿ ಮಾತನಾಡಿ, ವಸ್ತುಗಳ ಖರೀದಿ ಹಾಗೂ ವ್ಯವಹಾರದಲ್ಲಿ ಮೋಸ ಅಥವಾ ವಂಚನೆಗೆ ಒಳಗಾಗದಲ್ಲಿ ತಕ್ಷಣ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದೂರು ನೀಡಬೇಕು. ಕಾನೂನಿನ ನೆರವಿಗಾಗಿ ಟೋಲ್​ ಫ್ರೀ ಸಂಖ್ಯೆ 15100 ಸಂಖ್ಯೆಗೆ ಕರೆ ಮಾಡಬಹುದು ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪಕಿರ್ಸಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶ್ವರಪ್ಪ ಬಿ.ಎಸ್​. ಮಾತನಾಡಿ, ಒಂದು ವಸ್ತು ಅಥವಾ ಸೇವೆಯನ್ನು ಹಣ ಕೊಟ್ಟು ಪಡೆಯುವ ಪ್ರತಿಯೊಬ್ಬರೂ ಗ್ರಾಹಕರಾಗಿರುತ್ತಾರೆ. ವಸ್ತುಗಳನ್ನು ಖರೀದಿಸುವಾಗ ಆತುರಮಾಡದೆ ಯೋಚನೆ ಮಾಡಿ ಖರೀದಿಸಬೇಕು. ದೈನಂದಿನ ವ್ಯವಹಾರದಲ್ಲಿ ಖರೀದಿಸಿದ ವಸ್ತುಗಳಲ್ಲಿ ನ್ಯೂನ್ಯತೆ ಅಥವಾ ದೋಷಗಳು ಕಂಡುಬಂದಲ್ಲಿ ಖರೀದಿಸಿದ ರಸೀದಿಯೊಂದಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸುವ ಮೂಲಕ ಪರಿಹಾರ ಪಡೆಯಬಹುದು ಎಂದರು.
ಗ್ರಾಹಕರ ಹಕ್ಕು ಕಾಯ್ದೆ 2019ರ ಕುರಿತು ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್​.ಎನ್​. ಡಿಳ್ಳೆಪ್ಪನವರ ಉಪನ್ಯಾಸ ನೀಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್​.ಎಚ್​. ಜತ್ತಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಉಮಾದೇವಿ ಹಿರೇಮಠ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಎಂ.ಎಸ್​. ರಮೇಶ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಸಿದ್ದಪ್ಪ ಪೂಜಾರಿ, ಎಸ್​.ಎಚ್​. ಮಜೀದ್​ ಇತರರು ಉಪಸ್ಥಿತರಿದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…