More

    ಜಿಲ್ಲಾ ಮಟ್ಟದ ಉದ್ಯೋಗ ಮೇಳ ಮಾ.3ರಂದು; ಉದ್ಯೋಗದಾತರು, ಉದ್ಯೋಗಾಕಾಂಕ್ಷಿಗಳ ನೋಂದಣಿಗೆ ಆಹ್ವಾನ; ಪೋಸ್ಟರ್ ಬಿಡುಗಡೆಗೊಳಿಸಿದ ಡಿಸಿ

    ಹಾವೇರಿ: ಜಿಲ್ಲಾ ಕೌಶಲಾಭಿವೃದ್ದಿ ಇಲಾಖೆ ವತಿಯಿಂದ ಸರ್ವರಿಗೂ ಉದ್ಯೋಗ ಕಾರ್ಯಕ್ರಮದ ಅಂಗವಾಗಿ ನಗರದ ಶಿವಲಿಂಗೇಶ್ವರ ಮಹಿಳಾ ವಿದ್ಯಾಲಯದ ಆವರಣದಲ್ಲಿ ಮಾರ್ಚ್ 3ರಂದು ಬೆಳಗ್ಗೆ 9ರಿಂದ 4 ಗಂಟೆವರೆಗೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಕಾಂಕ್ಷಿಗಳು ಹಾಗೂ ಉದ್ಯೋಗದಾತರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಕರೆ ನೀಡಿದರು.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಮೇಳದ ಪ್ರಚಾರ ಸಾಮಗ್ರಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಸಹಾಯವಾಣಿ ಕೇಂದ್ರ ಉದ್ಘಾಟನೆ, ಲೋಗೊ ಅನಾವರಣ, ಅಂತರ್ಜಾಲದ ವಿಳಾಸದ ಅನಾವರಣ ಮಾಡಲಾಗಿದೆ. ಉದ್ಯೋಗಳ ಮೇಳದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
    ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಅಂಗವಾಗಿ ಜಿಲ್ಲೆಯಲ್ಲಿರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಎಲ್ಲ ಪದವಿ ಕಾಲೇಜುಗಳಲ್ಲಿ ಜಿಲ್ಲಾದ್ಯಾಂತ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈಗಾಗಲೇ 25 ಉದ್ಯೋಗದಾತರನ್ನು ಸಂಪರ್ಕಿಸಲಾಗಿದೆ. ಅದರಲ್ಲಿ 155 ಹುದ್ದೆಗಳು ಅವಶ್ಯವಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದರು.
    ಈಗಾಗಲೇ 1,804 ಉದ್ಯೋಗಾಕಾಂಕ್ಷಿಗಳು Skillconnect.com ನಲ್ಲಿ ನೊಂದಾಯಿಸಿಕೊಂಡಿದ್ದಾರೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ವಾಣಿಜ್ಯೋದ್ಯಮ ಮಂಡಳಿ, ರೋಟರಿ ಕ್ಲಬ್, ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ಮೇಳ ಆಯೋಜಿಸಲಾಗಿದೆ. ಸುಮಾರು 2,500ಕ್ಕಿಂತ ಹೆಚ್ಚು ಆಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಉದ್ಯೋಗದಾತರು ಹಾಗೂ ಉದ್ಯೋಗಾಕಾಂಕ್ಷಿಗಳ www.haverijobfair2024.com ಅಂತರ್ಜಾಲದಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 90197 50485ಗೆ ಸಂಪರ್ಕಿಸಬಹುದು ಎಂದರು.
    ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ರವಿ ಮೆಣಸಿನಕಾಯಿ, ಕೃಷಿ ಇಲಾಖೆ ಉಪನಿರ್ದೇಶಕ ಎಚ್.ಹುಲಿರಾಜ, ಕೌಶಲಾಭಿವೃದ್ಧಿ ಇಲಾಖೆಯ ಉದ್ಯೋಗಾಧಿಕಾರಿ ಸಂಜಯ ಕೋರೆ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts