More

  ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಹಲವರಿಗೆ ಉದ್ಯೋಗ

  ಹಾವೇರಿ: ಬೆಳೆಯುತ್ತಿರುವ ಜನಸಂಖ್ಯೆಯಿಂದಾಗಿ ನಿರುದ್ಯೋಗ ಸಮಸ್ಯೆ ಉಂಟಾಗಿದೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗುವುದು ಕಷ್ಟ. ರಾಜ್ಯದಲ್ಲಿ ನಿರುದ್ಯೋಗ ಹೋಗಲಾಡಿಸುವ ನಿಟ್ಟಿನಲ್ಲಿ ಸರ್ಕಾರ ಉದ್ಯೋಗ ಮೇಳದಂತ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಿರುದ್ಯೋಗಿಗಳು ಮೇಳದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  ಜಿಲ್ಲಾಡಳಿತ, ಜಿಪಂ, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ನಗರದ ಹುಕ್ಕೇರಿಮಠ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಜಿಲ್ಲಾ ಉದ್ಯೋಗ ಮೇಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
  ಪೂಜ್ಯರ ಆಶೀರ್ವಾದದಿಂದ ಜಿಲ್ಲೆಯ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿಗಳು ಉದ್ಯೋಗವನ್ನು ಗಿಟ್ಟಿಸಿಕೊಳ್ಳಬೇಕು. ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಲು ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು.
  ಸಾನ್ನಿಧ್ಯ ವಹಿಸಿದ್ದ ಗೌರಿಮಠ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ರೊಕ್ಕ ಸಂಪತ್ತು ಸಿಗಬೇಕಾದರೆ ಉದ್ಯೋಗದಲ್ಲಿ ತೊಡಗಿರಬೇಕು. ಕಾಯಕದಲ್ಲಿ ಹಣ ಸಂಪಾದನೆ ಮಾಡಬೇಕು. ಸರ್ಕಾರದ ಯೋಜನೆಗಳಿಗೆ ಆಶ್ರಯವಾಗದೆ ಉದ್ಯೋಗಿ ಆಗಬೇಕು. ಉದ್ಯೋಗವನ್ನು ಬೆಕ್ಕಿನ ಹಾಗೆ ಮಾಡಬೇಕು. ಪ್ರಯತ್ನ ಬಿಡದೆ ನಿರಂತರವಾಗಿ ಕೆಲಸ ಮಾಡಬೇಕು. ದೇಶ ಅಭಿವೃದ್ದಿ ಆಗಬೇಕು ಎಂದುರೆ ನಿರುದ್ಯೋಗಿಯಾಗದೆ ಉದ್ಯೋಗಿ ಗಳಾಗಬೇಕು ಎಂದರು.
  ಉದ್ಯೋಗ ಮೇಳದಲ್ಲಿ 2800ಕ್ಕೂ ಅಧಿಕ ನಿರುದ್ಯೋಗಿಗಳು ನೋಂದಣಿ ಮಾಡಿಸಿಕೊಂಡಿದ್ದರು. ಅದರಲ್ಲಿ ವಿವಿಧ ಸಂಸ್ಥೆಗಳು ನಡೆಸಿದ ಸಂದರ್ಶನದಲ್ಲಿ ಆಯ್ಕೆಯಾದವರಿಗೆ ಸ್ಥಳದಲ್ಲಿಯೆ ನೇಮಕಾತಿ ಪತ್ರ ನೀಡಲಾಯಿತು.
  ನಗರಸಭೆ ಮಾಜಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ರೋಟರಿ ಕ್ಲಬ್ ಅಧ್ಯಕ್ಷ ಸುಜಿತ್ ಜೈನ್, ರವಿ ಹಿಂಚಗೇರಿ, ರಮೇಶ ಬಳ್ಳಾರಿ, ನಾಗರಾಜ ಶೆಟ್ಟಿ, ಮಲ್ಲಿಕಾರ್ಜುನ ಹಂದ್ರಾಳ, ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ರವಿ ಮೆಣಸಿನಕಾಯಿ, ಕೃಷ್ಣ ಮೂರ್ತಿ, ರೇಣುಕಾ ಪುತ್ರನ್ನ, ಜಗದೀಶ ತುಪ್ಪದ, ನಿರಂಜನ್ ತಾಂಡೂರ, ಶಿವಣ್ಣ ಶಿರೂರ, ಗಣೇಶ ಹೂಗಾರ, ಮಾಲತೇಶ ಮಲಿಮಠ, ಎಸ್.ಸಿ. ಹಿರೇಮಠ, ಸಂಜಯ ಕೊರೆ ಮತ್ತಿತರರು ಉಪಸ್ಥಿತರಿದ್ದರು.
  ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಅಧಿಕಾರಿ ಹುಲಿರಾಜು ಸ್ವಾಗತಿಸಿದರು. ಕೃಷ್ಣ ಜವಳಿ ನಿರೂಪಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts