More

    ಆರು ತಿಂಗಳಲ್ಲಿ ಜಿಲ್ಲೆಯಲ್ಲಿ ಬದಲಾವಣೆ; ಜಿಲ್ಲೆಯ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ; ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿಕೆ

    ಹಾವೇರಿ: ಹೊರಗಿನ ಜಿಲ್ಲೆಯಿಂದ ಬಂದವನು ಕೆಲಸ ಆಗುವುದಿಲ್ಲ ಎಂಬ ಭಾವನೆ ಬೇಡ. ಆರು ತಿಂಗಳ ನಂತರ ಬದಲಾವಣೆ ನೋಡಿ. ಜಿಲ್ಲೆಯ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಪರಿಹಾರಕ್ಕೆ ಕಾಲಾವಕಾಶಬೇಕು. ಎಲ್ಲ ಸಮಸ್ಯೆಗಳಿಗೂ ಕಾಲಮಿತಿಯೊಳಗೆ ಪರಿಹಾರ ಕಂಡುಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತೇನೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಹಾಗೂ ನೂತನ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ ವ್ಯಕ್ತಪಡಿಸಿದರು.
    ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ನಗರದ ಕುಡಿಯುವ ನೀರಿನ ಸಮಸ್ಯೆ ಹಾಗೂ ಯುಜಿಡಿ ಸಮಸ್ಯೆ ಸೇರಿದಂತೆ ಜಿಲ್ಲೆಯ ವಿವಿಧ ಸಮಸ್ಯೆಗಳ ಮಾಹಿತಿ ಪಡೆಯಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಆದ್ಯತೆ ಮೇರೆಗೆ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
    ಹೆಗ್ಗೇರಿ ಕೆರೆಗೆ ನೀರು ಬಿಡಬೇಕಾಗಿತ್ತು, ಬಿಟ್ಟಿಲ್ಲ. ಕೆರೆಗೆ ಪೊಲೀಸ್ ವಸತಿ ಗೃಹಗಳ ಕೊಳಚೆ ನೀರು ಸೇರಿಸುತ್ತಿರುವುದಾಗಿ ಗೊತ್ತಾಗಿದೆ. ಇದರ ಪರಿಶೀಲನೆಗೆ ಜಿಲ್ಲಾಧಿಕಾರಿ ಹಾಗೂ ಪರಿಸರ ಮಾಲಿನ್ಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜಿಲ್ಲೆಯ ಸಮಸ್ಯೆಗಳನ್ನು ತಿಳಿದುಕೊಂಡು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
    ವಿದ್ಯುತ್ ದರ ಹೆಚ್ಚಳ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಇಆರ್‌ಸಿ ವಿದ್ಯುತ್ ಪರಿಷ್ಕರಣೆ ಮಾಡುತ್ತದೆ. ಸರ್ಕಾರ ಅಲ್ಲ ಎಂದು ಸ್ಪಷ್ಟಪಡಿಸಿದರು. ಏಪ್ರಿಲ್ ಮತ್ತು ಮೇನಲ್ಲಿ ಬಿಲ್ ಪಾವತಿಸಿದ ಕಾರಣ ವಿದ್ಯುತ್ ಬಿಲ್ ಅಧಿಕವಾಗಿ ಬಂದಿದೆ ಎಂದರು.
    ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಆರ್.ಬಿ.ಐ ಹಾಗೂ ನಬಾರ್ಡ್ ಅನುಮತಿ ನೀಡಬೇಕಾಗುತ್ತದೆ. ಶೇ.70ರಷ್ಟು ಜನರು ವೋಟ್ ಮಾಡಬೇಕಾಗುತ್ತದೆ ಎಂದರು.
    ಸುದ್ದಿಗೋಷ್ಠಿಯಲ್ಲಿ ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಸಲೀಂ ಅಹ್ಮದ್, ಸಂಜೀವಕುಮಾರ ನೀರಲಗಿ, ಇತರರಿದ್ದರು.
    ಕೃಷಿ ಕಾಯ್ದೆ ರದ್ದು
    ಹಿಂದಿನ ಸರ್ಕಾರ ಜಾರಿಗೊಳಿಸಿದ ಮೂರು ಕೃಷಿ ಕಾಯ್ದೆಗಳನ್ನು ನೂರಕ್ಕೆ ನೂರಷ್ಟು ವಾಪಸ್ ಪಡೆಯಲಾಗುವುದು. ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts