More

    ನೀರಿನ ಸಮಸ್ಯೆ ನೀಗಿಸಲು ತಹಶೀಲ್ದಾರ್‌ಗೆ ಹೊಣೆ; ಜಿಲ್ಲಾಧಿಕಾರಿ ಸೂಚನೆ

    ಹಾವೇರಿ: ಗ್ರಾಮೀಣ ಪ್ರದೇಶ ಅಥವಾ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಆಯಾ ತಾಲೂಕುಗಳ ತಹಶೀಲ್ದಾರರೇ ನೇರವಾಗಿ ಉಸ್ತುವಾರಿ ವಹಿಸಿಕೊಂಡು ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಎಲ್ಲ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚಿಸಿದ್ದಾರೆ.
    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಆಯಾ ತಾಲೂಕುಗಳಲ್ಲಿ ಗ್ರಾಮೀಣ ಪ್ರದೇಶಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಇದೇ ರೀತಿ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಆಯಾ ನಗರ ಸ್ಥಳೀಯ ಸಂಸ್ಥೆಗಳ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
    ಜಿಲ್ಲೆಯಲ್ಲಿ ಕಳೆದ ತಿಂಗಳು ಸಮಯಕ್ಕೆ ಸರಿಯಾಗಿ ಮಳೆ ಬಾರದೇ ಗ್ರಾಮೀಣ ಪ್ರದೇಶದಲ್ಲಿ ಮತ್ತು ನಗರ- ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗಿತ್ತು. ಇಂತಹ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಥವಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಕ್ಷಣ ಕ್ರಮ ವಹಿಸಿ ಕುಡಿಯುವ ನೀರಿನ ಪೂರೈಕೆಯ ಸಮಸ್ಯೆಯನ್ನು ಬಗೆಹರಿಸಬೇಕಾಗಿತ್ತು. ಈಗಲೂ ಹಲವೆಡೆ ನೀರಿನ ವ್ಯತ್ಯಯ ಉಂಟಾಗುತ್ತಿದೆ.
    ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಅಥವಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಹಕರಿಸದೇ ಇದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ತಕ್ಷಣ ವರದಿ ಸಲ್ಲಿಸಲು ಆಯಾ ತಾಲೂಕಿನ ತಹಶೀಲ್ದಾರರು ಕ್ರಮವಹಿಸುವಂತೆ ಡಿಸಿ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts