More

    ಹಾವೇರಿ ಗ್ರಾಮದೇವತೆ ದ್ಯಾಮವ್ವ ದೇವಿ ಮೆರವಣಿಗೆ ಫೆ.27ರಂದು; ಎಂಜಿ ರಸ್ತೆಯ ಚೌತಮನಿ ಕಟ್ಟೆಯಲ್ಲಿ ಪ್ರತಿಷ್ಠಾಪನೆ

    ಹಾವೇರಿ: ನಗರದ ಇತಿಹಾಸ ಪ್ರಸಿದ್ಧ ಗ್ರಾಮದೇವತೆ ಶ್ರೀ ದ್ಯಾಮವ್ವದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.27ರಂದು ಸಂಜೆ 4 ಗಂಟೆಗೆ ದೇವಸ್ಥಾನದಿಂದ ದ್ಯಾಮವ್ವದೇವಿ ಮೂರ್ತಿಯ ಭವ್ಯ ಮೆರವಣಿಗೆ ಆರಂಭವಾಗಲಿದೆ.
    ವಿವಿಧ ವಾದ್ಯವೈಭೋಗ, ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀದೇವಿಯ ಉತ್ಸವ ಮೂರ್ತಿ ಮೆರವಣಿಗೆ ಆರಂಭಗೊಳ್ಳಲಿದೆ. ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಿ ಫೆ.28ರ ಬೆಳಗ್ಗೆ ನಸುಕಿನ 4ಗಂಟೆಗೆ ನಗರದ ಹೃದಯ ಭಾಗ ಮಹಾತ್ಮ ಗಾಂಧಿ ರಸ್ತೆಯ ದ್ಯಾಮವ್ವನ ಪಾದಗಟ್ಟೆ ಸ್ಥಳದಲ್ಲಿ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ ದೇವಿ ವಿರಾಜಮಾನವಾಗಲಿದ್ದಾಳೆ. ನಂತರ ಜಾತ್ರೆಯ ಎಲ್ಲ ರೀತಿಯ ವಿಶೇಷ ಪೂಜಾ ಕೈಂಕರ್ಯಗಳು ಇದೇ ಕಟ್ಟೆಯಲ್ಲಿ ನಡೆಯಲಿವೆ.
    ಮೆರವಣಿಗೆಯು ನಗರದ ದ್ಯಾಮವ್ವನ ಗುಡಿಯಿಂದ ನಾಯ್ಕರಚಾಳ, ಹಳೆಅಂಚೆ ಕಚೇರಿ ರಸ್ತೆ, ಕಮಲ ಕಲ್ಯಾಣ ಮಂಟಪ ರಸ್ತೆ, ಜೈನರ ರಸ್ತೆ, ಹಳೆ ಊರಿನ ಓಣಿ, ಶ್ರೀರಾಮದೇವರ ಗುಡಿ, ಗಾಂಧಿವೃತ್ತ, ಕಲ್ಲುಮಂಟಪ ರಸ್ತೆ, ಬಸ್ತಿಓಣಿ, ತರಕಾರಿ ಮಾರುಕಟ್ಟೆ, ಗೌಳಿಗಲ್ಲಿ, ಯಾಲಕ್ಕಿ ಓಣಿ, ಗುಜ್ಜರ ಗುಡಿ, ಪುರದ ಓಣಿ, ಚೌಡೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಸುಭಾಸ ವೃತ್ತ, ಮೇಲಿನಪೇಟೆ, ಗಾಂಧಿರಸ್ತೆ, ಹಳೆಚಾವಡಿ ಮಾರ್ಗವಾಗಿ ಎಂಜಿ ರಸ್ತೆಯ ಚೌತಮನಿ ಕಟ್ಟೆಯಲ್ಲಿ ಅಂತ್ಯವಾಗಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts