More

  ಸ್ಟ್ರಾಂಗ್ ರೂಂಗೆ ಅಪರ ಮುಖ್ಯ ಚುನಾವಣಾಧಿಕಾರಿ ಭೇಟಿ ಮೇ 16ರಂದು

  ಹಾವೇರಿ: ಲೋಕಸಭಾ ಚುನಾವಣೆಯ ವಿದ್ಯುನ್ಮಾನ ಮತಯಂತ್ರಗಳ ದಾಸ್ತಾನು ಕೊಠಡಿಗೆ (ಸ್ಟ್ರಾಂಗ್ ರೂಂ) ಮೇ 16ರಂದು ಕರ್ನಾಟಕ ಚುನಾವಣಾ ಆಯೋಗದ ಅಪರ ಮುಖ್ಯ ಚುನಾವಣಾಧಿಕಾರಿ, ಐಎಎಸ್ ಅಧಿಕಾರಿ ಕುರ್ಮಾರಾವ್ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ.
  ಹಾವೇರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರ ದೇವಗಿರಿ ಸರ್ಕಾರಿ ಇಂಜನಿಯರಿಂಗ್ ಕಾಲೇಜಿನಲಿನ್ಲ ಸ್ಟ್ರಾಂಗ್ ರೂಂಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
  ಲೈಜನ್ ಅಧಿಕಾರಿ ನೇಮಕ: ಲೈಜನ್ ಅಧಿಕಾರಿಯಾಗಿ ರೇಷ್ಮೆ ಇಲಾಖೆ ಉಪನಿರ್ದೇಶಕ ಮಾಲತೇಶ ಪಾಟೀಲ ಅವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts