More

    ಕೆಂಪಣ್ಣನ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

    ಹಾವೇರಿ: 40 ಪರ್ಸೆಂಟ್ ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಗಮನಿಸಿದೆ. ಕಾಂಗ್ರೆಸ್ ಸರ್ಕಾರದ ಮೇಲೆ ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
    ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40 ಪರ್ಸೆಂಟ್ ಕಮಿಷನ್ ಕುರಿತ ತನಿಖೆಯ ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿದೆ. ಸರ್ಕಾರದಲ್ಲಿ ಹಣ ಇಲ್ಲದಿರುವುದಕ್ಕೆ ಈ ರೀತಿಯ ಕಮಿಷನ್ ಮಾಡಿಕೊಂಡು ಕುಳಿತಿದ್ದೀರಿ. ಆರು ವಾರದಲ್ಲಿ ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರ್ಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
    ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ, ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ಆ ರೀತಿ ಮಾತನಾಡುವಂತೆ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸಿಬಿಟ್ಟಿದ್ದಾರೆ. ಅಭಿವೃದ್ಧಿ ಶೂನ್ಯವಾಗಿದೆ ಎಂದು ಹೇಳಿದರು.
    ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳನ್ನು ಹೇಳಿಸಿದ್ದಾರೆ. ಹಿಂದಿನ ಸರ್ಕಾರದ ಸಾಧನೆಗಳನ್ನು ತನ್ನ ಸಾಧನೆ ಎಂದು ಸರ್ಕಾರ ಹೇಳಿಕೊಂಡಿದೆ. ಈ ಸರ್ಕಾರ ಯಾವುದೇ ಸಾಧನೆ ಮಾಡಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಹಾನಗಲ್ಲ ಗ್ಯಾಂಗ್‌ರೇಪ್ ಪ್ರಕರಣ ಸೇರಿದಂತೆ ಕಾನೂನು ಸುವ್ಯವಸ್ಥೆ ಬಗ್ಗೆ ಸದನದಲ್ಲಿ ಚರ್ಚಿಸುತ್ತೇವೆ ಎಂದರು.
    ಲೋಕಸಭೆ ಟಿಕೆಟ್ ಹಂಚಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಫೆ.17, 18ರಂದು ದೆಹಲಿಯಲ್ಲಿ ರಾಷ್ಟ್ರೀಯ ಕೌನ್ಸಿಲ್ ಸಭೆ ನಡೆಯಲಿದೆ. ಆ ಸಭೆಯ ಬಳಿಕ ಟಿಕೆಟ್ ಹಂಚಿಕೆ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಜೆಡಿಎಸ್ ಜತೆಗೆ ಟಿಕೆಟ್ ಹಂಚಿಕೆ ವಿಚಾರ ಅಂದು ಚರ್ಚೆ ಆಗಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts