More

    ಅಬಕಾರಿ ಅಕ್ರಮ ತಡೆಗೆ ಕಂಟ್ರೋಲ್ ರೂಮ್

    ಹಾವೇರಿ: ಮುಂಬರುವ ಲೋಕಸಭಾ ಚುನಾವಣೆ ವೇಳೆ ಚುನಾವಣೆ ಪ್ರಕ್ರಿಯೆಗಳನ್ನು ನ್ಯಾಯಯುತವಾಗಿ, ಶಾಂತಿಯುತವಾಗಿ ನಡೆಸಲು ಹಾಗೂ ಅಕ್ರಮಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ 24/7 ಕಂಟ್ರೋಲ್ ರೂಮ್ ತೆರೆಯಲಾಗಿದೆ ಎಂದು ಹಾವೇರಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸ್ವಪ್ನ ಆರ್.ಎಸ್. ತಿಳಿಸಿದ್ದಾರೆ.
    ಅಬಕಾರಿ ಅಕ್ರಮಗಳು ಕಂಡುಬಂದಲ್ಲಿ ಸಾರ್ವಜನಿಕರು ಉಚಿತವಾಗಿ ದೂ.ಸಂ. 1800-425-0662 ಗೆ ಅಥವಾ ಸ್ಥಿರ ದೂರವಾಣಿ ಸಂಖ್ಯೆ 08375-232902ಕ್ಕೆ ಕರೆ ಮಾಡಿ ಮಾಹಿತಿ ನೀಡಲು ಕೋರಲಾಗಿದೆ. ದೂರುದಾರ ಮತ್ತು ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts