More

    ಗೊಬ್ಬರದ ಜತೆಗೆ ಲಿಂಕ್ ಮಾರಾಟ ತಡೆಗಟ್ಟಿ; ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ ಒತ್ತಾಯ

    ಹಾವೇರಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ರೈತರು ಹೊಲಗಳನ್ನು ಉಳಿಮೆ ಮಾಡಿ ಬಿತ್ತನೆ ಮಾಡಲು ತಯಾರಿ ಮಾಡಿಕೊಂಡಿರುವ ಸಂದರ್ಭದಲ್ಲಿ ಗೊಬ್ಬರ ಖರೀದಿಸಲು ಹೋದ ರೈತರಿಗೆ ಲಿಂಕ್ ಎಂದು ಬೇರೆ ಗೊಬ್ಬರ ಅಥವಾ ನ್ಯಾನೋ ಯೂರಿಯಾ, ನ್ಯಾನೋ ಡಿಎಪಿಯನ್ನು ಒತ್ತಾಯಪೂರ್ವಕವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪೂರ ಆರೋಪಿಸಿದ್ದಾರೆ.
    ರೈತರು ತಮಗೆ ಬೇಕಾದ ಗೊಬ್ಬರವನ್ನು ಕೊಂಡುಕೊಳ್ಳಲು ಹೋದರೆ ಅದಕ್ಕೆ ಲಿಂಕ್ ಎಂದು ಬೇಡವಾದ ಗೊಬ್ಬರ ತೆಗೆದುಕೊಳ್ಳಬೇಕು ಎಂದು ವ್ಯಾಪಾರಸ್ಥರು ರೈತರಿಗೆ ಹೊರೆ ಹಾಕುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ, ‘ನಮಗೆ ಸರ್ಕಾರದಿಂದಲೇ ಗೊಬ್ಬರದ ಜತೆಗೆ ಇವೆಲ್ಲವನ್ನೂ ಲಿಂಕ್ ಕೊಟ್ಟಿದ್ದಾರೆ. ಬೇಕೆಂದರೆ ತೆಗೆದುಕೊಳ್ಳಿ ಇಲ್ಲವಾದರೆ ಬಿಡಿ’ ಎಂದು ಸ್ಪಷ್ಟವಾಗಿ ಹೇಳುತ್ತಾರೆ.
    ಮೊದಲೇ ಬರಗಾಲದಿಂದ ನೊಂದಿರುವ ರೈತರು ಸಂಕಷ್ಟದಲ್ಲಿದ್ದಾರೆ. ಈ ಬಾರಿಯಾದರೂ ಬಿತ್ತನೆ ಮಾಡಿ ಉತ್ತಮ ಬೆಳೆ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ, ಗೊಬ್ಬರದ ಜತೆಗೆ ನಿರುಪಯುಕ್ತವಾದ, ಅಗತ್ಯವಿಲ್ಲದ ವಸ್ತುಗಳನ್ನು ಮಾರಾಟ ಮಾಡದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts