More

    ಬೆಳೆವಿಮೆ ನೋಂದಣಿಗೆ ಅವಕಾಶ

    ಹಾವೇರಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಅನುಷ್ಠಾನದ ಕುರಿತು ಸರ್ಕಾರದಿಂದ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯಾದ್ಯಂತ ಬೆಳೆ ವಿಮೆ ನೋಂದಣಿಗಾಗಿ ಬ್ಯಾಂಕುಗಳು/ ಗ್ರಾಮ ಒನ್ ಕೇಂದ್ರಗಳು ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಿಗೆ ಈ ಯೋಜನೆಯಡಿ ಸಂರಕ್ಷಣೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿದೆ.
    ಪ್ರಸಕ್ತ 2023ರ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ನೋಂದಣಿಗಾಗಿ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡಿರಬೇಕು ಹಾಗೂ ಫ್ರೂಟ್ಸ್ ಐಡಿ ಪಡೆದುಕೊಂಡಿರಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಾದ ಸರ್ವೆ ನಂಬರ್‌ಗಳಿಗೆ ಮಾತ್ರ ಬೆಳೆ ವಿಮೆಯಡಿ ನೋಂದಣಿ ಮಾಡಲು ಅವಕಾಶವಿರುತ್ತದೆ. ಜಂಟಿ ಖಾತೆದಾರರು ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಾದ ವಿಸ್ತೀರ್ಣಕ್ಕೆ ಅನುಗುಣವಾಗಿ ಬೆಳೆ ವಿಮೆ ನೋಂದಣಿ ಮಾಡಲು ಅವಕಾಶವಿರುತ್ತದೆ.
    ಫ್ರೂಟ್ಸ್ ಐಡಿ ದಾಖಲಿಸಲು ಅಥವಾ ಯಾವುದೇ ಮಾರ್ಪಾಡಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಜಿಲ್ಲಾವಾರು, ಬೆಳೆವಾರು ನಿಗದಿಪಡಿಸಿದ ಅಂತಿಮ ದಿನಾಂಕದೊಳಗಾಗಿ ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆವಿಮೆ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts