ಹಾವೇರಿ: ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಜು.31ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 10.30ಕ್ಕೆ ಸವಣೂರ ತಾಲೂಕು ಕುಣಿಮೆಳ್ಳಿಹಳ್ಳಿಗೆ ಆಗಮಿಸಿ ಬೆಳೆಹಾನಿ ಪರಿಶೀಲನೆ ನಡೆಸಲಿದ್ದಾರೆ. 11 ಗಂಟೆಗೆ ವರದಾಹಳ್ಳಿ, 11.30ಕ್ಕೆ ನಾಗನೂರ ಗ್ರಾಮದಲ್ಲಿ ಬೆಳೆಹಾನಿ ಪರಿಶೀಲನೆ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಹಾನಗಲ್ಲ ತಾಲೂಕು ಕೂಡಲ ಗ್ರಾಮಕ್ಕೆ ತೆರಳಿ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸುವರು. 12.45ಕ್ಕೆ ಬಾಳಂಬೀಡದಲ್ಲಿ ಬೆಳೆಹಾನಿ ಪರಿಶೀಲನೆ, ಮಧ್ಯಾಹ್ನ 1.15ಕ್ಕೆ ಅಕ್ಕಿಆಲೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ, ಮನೆಹಾನಿ ಹಾಗೂ ಸರ್ಕಾರಿ ಶಾಲಾ ಹಾನಿ ಪರಿಶೀಲನೆ ನಡೆಸುವರು. ನಂತರ ಕೆರೆಗೆ ಬಾಗಿನ ಅರ್ಪಿಸುವರು. ಸಂಜೆ 4 ಗಂಟೆಗೆ ಹಾವೇರಿ ತಾಲೂಕು ಸಂಗೂರ ಗ್ರಾಮಕ್ಕೆ ಭೇಟಿ ನೀಡಿ ಮನೆಹಾನಿ ಪರಿಶೀಲಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅಧಿಕಾರಿಗಳ ಸಭೆ ನಾಳೆ
ಆಗಸ್ಟ್ 1ರಂದು ಬೆಳಗ್ಗೆ 11 ಗಂಟೆಗೆ ಸವಣೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಪರಿವೀಕ್ಷಣೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಉಸ್ತುವಾರಿ ಸಚಿವ ಶಿವಾನಂದ ಪಾಟೀಲರಿಂದ ಪ್ರವಾಹ ಪರಿಶೀಲನೆ ಜು.31ರಂದು
You Might Also Like
ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!
ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…
ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information
ಬೆಂಗಳೂರು: ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…