More

    ರಾಜ್ಯ ರೈತ ಸಂಘದಿಂದ ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ

    ಹಾವೇರಿ: ಕೃಷಿ ಸಾಲ ಮನ್ನಾ, ಬೆಳೆ ಪರಿಹಾರ ಬಿಡುಗಡೆ, ವಿದ್ಯುತ್ ಖಾಸಗೀಕರಣ ನಿರ್ಧಾರದಿಂದ ಹಿಂದೆ ಸರಿಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
    ಕಾಗಿನೆಲೆ ರಸ್ತೆಯ ಮುರುಘಾ ಮಠದಿಂದ ಆರಂಭಗೊಂಡ ಪ್ರತಿಭಟನಾ ರ್ಯಾಲಿ ಸಿದ್ದಪ್ಪ ವೃತ್ತದವರೆಗೆ ಸಾಗಿತು. ವೃತ್ತದಲ್ಲಿ ಧರಣಿ ಕುಳಿತ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎರಡು ಬಾರು ಬಿತ್ತನೆ ಮಾಡಿ ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ. ಸರ್ಕಾರ ಈ ಕೂಡಲೇ ಕೃಷಿ ಸಾಲ ಮನ್ನಾ ಮಾಡಬೇಕು. ತುಂಗಾ ಮೇಲ್ದಂಡೆ ಯೋಜನೆಯಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಕೊಡಬೇಕು. ಅತಿವೃಷ್ಟಿಗೆ ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಎಕರೆಗೆ 30 ಸಾವಿರ ರೂ. ಪರಿಹಾರ ಕೊಡಬೇಕು. ಬಾಕಿ ಹಾಗೂ ಈ ಬಾರಿಯ ಬೆಳೆ ಪರಿಹಾರ ಕೂಡಲೇ ಬಿಡುಗಡೆ ಮಾಡಬೇಕು.
    ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಮಂಜೂರ ಮಾಡಿ ಮೂರು ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಬೇಕು. ರಐಲು ಹಳಿಗಳ ಎರಡೂ ಬದಿ ಸರ್ವಿಸ್ ರಸ್ತೆ ನಿರ್ಮಿಸಬೇಕು, ಹಾವೇರಿ ಶಹರದ ರಸ್ತೆ ಮತ್ತು ಚರಂಡಿಗಳನ್ನು ದುರಸ್ಥಿಪಡಿಸಬೇಕು, ರೈತರ ಜಮೀನಿಗೆ ಹೋಗಲು ಸೂಕ್ತ ದಾರಿ ಕಲಿಸಬೇಕು, ರೈತರ ಬೆಳೆಗಳಿಗೆ ಸೂಕ್ತ ಬೆಲೆ ನಿಗದಿಪಡಿಸಿ ಕಾನೂನಾತ್ಮಕ ರಕ್ಷಣೆ ಕೊಟ್ಟು ಖರೀದಿ ಕೇಂದ್ರ ಪ್ರಾರಂಭಿಸಬೇಕು, ರೈತರ ಪಂಪಸೆಟ್‌ಗಳಿಗೆ ಹಗಲಲ್ಲಿ 7 ತಾಸು ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿದರು.
    ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸರು ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದರು.
    ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಆರ್.ವಿ.ಕೆಂಚಳ್ಳೇರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ಮಹ್ಮದಗೌಸ್ ಪಾಟೀಲ, ಹಾನಗಲ್ ರೈತ ಸಂಘದ ಅಧ್ಯಕ್ಷ ಕರಿಗೌಡ ಪಾಟೀಲ, ಹಸಿರು ಸೇನೆ ಅಧ್ಯಕ್ಷ ಗಂಗಣ್ಣ ಎಲಿ, ರಾಣೆಬೆನ್ನೂರ ರೈತ ಸಂಘದ ಅಧ್ಯಕ್ಷ ಕರಬಸಪ್ಪ ಅಗಸಿಬಾಗಿಲು, ರಟ್ಟೀಹಳ್ಳಿ ಅಧ್ಯಕ್ಷ ಶಂಕರ ಶಿರಗಂಬಿ, ಹಿರೆಕೆರೂರ ಅಧ್ಯಕ್ಷ ಪ್ರಭು ಪ್ಯಾಟಿ, ಮತ್ತಿತರರು ಭಾಗವಹಿಸಿದ್ದರು.
    ಅಹೋರಾತ್ರಿ ಧರಣಿ
    ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿ ಎದುರು ಸೋಮವಾರ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಲಾಯಿತು. ಟೆಂಟ್‌ನಲ್ಲೇ ರೈತರು ಉಳಿದುಕೊಂಡು ಪ್ರತಿಭಟನೆಗೆ ಸಾಥ್ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts