More

    ಗಡ್ಡದೇವರಮಠ ನಾಮಪತ್ರ ಸಲ್ಲಿಕೆ ಏ.17ರಂದು; ಬೃಹತ್ ಮೆರವಣಿಗೆ, ಸಚಿವರು, ಗಣ್ಯರು ಭಾಗಿ

    ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಏ.17ರಂದು ಬೃಹತ್ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿಲಿದ್ದಾರೆ.
    ಬೆಳಗ್ಗೆ 9 ಗಂಟೆಗೆ ನಗರದ ಪುರ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಲಿದೆ. ಎಂ.ಜಿ. ರಸ್ತೆ, ಮೈಲಾರ ಮಹದೇವಪ್ಪ ವೃತ್ತ, ಹೊಸಮನಿ ಸಿದ್ದಪ್ಪ ವೃತ್ತ, ಜೆ.ಪಿ. ಸರ್ಕಲ್, ಗುರುಭವನ, ಮುನ್ಸಿಪಲ್ ಮೈದಾನದ ಮೂಲಕ ಸಾಗಿ ದುಂಡಿ ಬಸವೇಶ್ವರ ದೇವಸ್ಥಾನದವರೆಗೆ ರ‌್ಯಾಲಿ ನಡೆಯಲಿದೆ. ಮದ್ಯಾಹ್ನ 2 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ.
    ಮೆರವಣಿಗೆಯಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಎಚ್.ಕೆ.ಪಾಟೀಲ, ಶಿವಾನಂದ ಪಾಟೀಲ, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ, ಕೆ.ಪಿ.ಸಿ.ಸಿ ಉಪಾಧ್ಯಕ್ಷ ಡಿ.ಆರ್.ಪಾಟೀಲ, ಶಾಸಕರಾದ ಸಲೀಂ ಅಹ್ಮದ್, ಜಿ.ಎಸ್.ಪಾಟೀಲ, ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಶ್ರೀನಿವಾಸ ಮಾನೆ, ಯು.ಬಿ.ಬಣಕಾರ, ಪ್ರಕಾಶ ಕೋಳಿವಾಡ, ಮಾಜಿ ಶಾಸಕರು, ಮಾಜಿ ಸಂಸದರು, ವಿವಿಧ ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕೆ.ಪಿ.ಸಿ.ಸಿ. ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts