More

    ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಸಚಿವರಿಗೆ ಮನವಿ

    ಹಾವೇರಿ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಅನುಷ್ಠಾನ, ಹಳೇ ಪಿಂಚಣಿ ಮರು ಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಮೃತಗೌಡ ಪಾಟೀಲ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹಾಗೂ ವಿಧಾನಸಭಾ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ನಗರದಲ್ಲಿ ಶನಿವಾರ ಮನವಿ ಸಲ್ಲಿಸಲಾಯಿತು.
    ರಾಜ್ಯ 7ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ಸರ್ಕಾರ ಈಗಾಗಲೇ ನೀಡಿರುವ ಶೇ.17ರಷ್ಟು ಮಧ್ಯಂತರ ಪರಿಹಾರ ಭತ್ಯೆಯೂ ಸೇರಿದಂತೆ ಶೇ. 40ರಷ್ಟು ಫಿಟ್‌ಮೆಂಟ್ ಸೌಲಭ್ಯವನ್ನು ರಾಜ್ಯ ಸರ್ಕಾರಿ ನೌಕರರು ಹಾಗೂ ಸರ್ಕಾರದ ಅಧೀನಕ್ಕೊಳಪಡುವ ನೌಕರರಿಗೆ ದಿನಾಂಕ: 01-07-2022ರಿಂದ ಜಾರಿಗೆ ಬರುವಂತೆ ಸರ್ಕಾರಿ ಆದೇಶ ಹೊರಡಿಸಬೇಕು.
    ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಈಗಾಗಲೇ ಪಂಜಾಬ, ರಾಜಸ್ಥಾನ, ಚತ್ತೀಸಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರಣಾಳಿಕೆಯಲ್ಲಿ ತಾವು ನೀಡಿದ ಭರವಸೆಯಂತೆ ಕರ್ನಾಟಕದಲ್ಲೂ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ರಾಜ್ಯಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಿದರು.
    ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಎ.ಎಣ್ಣಿ, ರಾಜ್ಯ ಪರಿಷತ್ ಸದಸ್ಯ ಎಸ್.ಜಿ.ಸುಣಗಾರ, ಖಜಾಂಚಿ ಸಿದ್ದಣ್ಣ ಯಲಿಗಾರ, ಗೌರವಾಧ್ಯಕ್ಷ ಸಿ.ಜಿ.ಬ್ಯಾಡಗಿ, ಕಾರ್ಯಾಧ್ಯಕ್ಷ ವಾಚಪ್ಪ ಲಮಾಣಿ, ಪಿ.ಟಿ.ಕಾಮನಳ್ಳಿ, ಸರ್ಕಾರಿ ನೌಕರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts