More

  ಬ್ಯಾಡಗಿಯಲ್ಲಿ ಗೃಹಜ್ಯೋತಿ ಯೋಜನೆ ಉದ್ಘಾಟನೆ ಇಂದು

  ಹಾವೇರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ಪೂರೈಸುವ ಗೃಹಜ್ಯೋತಿ ಯೋಜನೆಯನ್ನು ಆ.5ರಂದು ಮಧ್ಯಾಹ್ನ 12 ಗಂಟೆಗೆ ಬ್ಯಾಡಗಿಯ ಎಪಿಎಂಸಿ ಯಾರ್ಡ್ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದಾರೆ.
  ಇಂಧನ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಮತ್ತು ಜಿಲ್ಲಾಡಳಿತ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಧಾನಸಭಾ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಇತರರು ಪಾಲ್ಗೊಳ್ಳಲಿದ್ದಾರೆ. ಶಾಸಕ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts