ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ 158ನೇ ಜಯಂತ್ಯುತ್ಸವ; ಭಾವಚಿತ್ರದ ಮೆರವಣಿಗೆ

18 HVR 13
Published on

ಹಾವೇರಿ: ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ 158ನೇ ಜಯಂತ್ಯುತ್ಸವದ ಅಂಗವಾಗಿ ಹಾವೇರಿ ನಗರದಲ್ಲಿ ಸೋಮವಾರ ಶ್ರೀಗಳ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. ನಗರದ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಗಾಂಧಿ ರಸ್ತೆಯ ಮೂಲಕ ಹುಕ್ಕೇರಿಮಠದವರೆಗೆ ಮೆರವಣಿಗೆ ಸಾಗಿತು.

ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ, ಗೌರಿಮಠದ ಶ್ರೀ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಅಕ್ಕಿಆಲೂರಿನ ಶಿವಬಸವ ಶ್ರೀಗಳು, ಹರಸೂರ ಬಣ್ಣದಮಠದ ಶ್ರೀ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು, ಕೂಡಲದ ಶ್ರೀ ಮಹೇಶ್ವರ ಶಿವಾಚಾರ್ಯರು, ಹೇರೂರ ಗುಬ್ಬಿ ನಂಜುಂಡೇಶ್ವರಮಠದ ಗುಬ್ಬಿ ನಂಜುಂಡ ಪಂಡಿತಾರಾಧ್ಯ ಶ್ರೀಗಳು, ಹೊಸಮಠದ ಬಸವ ಶಾಂತಲಿಂಗ ಶ್ರೀಗಳು, ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net