ಹಾನಗಲ್ಲ: ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಅಂಗವಾಗಿ ತಾಲೂಕಿನ ವಿವಿಧ ಗ್ಯಾರೇಜ್, ವಾಣಿಜ್ಯ ಅಂಗಡಿಗಳಲ್ಲಿ ಕಾರ್ಮಿಕ ನಿರೀಕ್ಷಕರ ನೇತೃತ್ವದಲ್ಲಿ ಗುರುವಾರ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳ ತಪಾಸಣೆ ಕಾರ್ಯ ನಡೆಸಿ, ಓರ್ವ ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಿ ಪೋಷಕರ ವಶಕ್ಕೆ ನೀಡಲಾಗಿದೆ.
ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಹಾಗೂ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಹಾನಗಲ್ಲ ತಹಸೀಲ್ದಾರ ರೇಣುಕಾ, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಶುರಾಮ ಪೂಜಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಾಘವೇಂದ್ರ ಶಿರೂರ, ಶಿಕ್ಷಣ ಇಲಾಖೆಯ ವಿ.ಟಿ.ಪಾಟೀಲ, ಪೊಲೀಸ್ ಇಲಾಖೆಯ ಅನಿಲ ಮಡಿವಾಳರ, ಮಕ್ಕಳ ಸಹಾಯವಾಣಿ ಕೇಂದ್ರದ ಯಲ್ಲಪ್ಪ ಅಡಿವೆಪ್ಪನವರ, ಇತರರು ಹಾಜರಿದ್ದರು.