ಹಾವೇರಿ: ಮಾಗಡಿ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಸಿ.ಬಾಲಕೃಷ್ಣ ಮೇ 15ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 10.30ಕ್ಕೆ ಶಿಗ್ಗಾಂವಿಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗೂ ಬೃಹತ್ ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹಾವೇರಿಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ.
