More

    ಮಹದೇವಪ್ಪ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದರು; ಶ್ರೀ ವೀರೇಶಾನಂದ ಸ್ವಾಮೀಜಿ

    ಹಾವೇರಿ: ಮೈಲಾರ ಮಹದೇವಪ್ಪ ಅವರು ಬ್ರಿಟಿಷರಿಗೆ ಹಿಂಹಸ್ವಪ್ನವಾಗಿ ಕಾಡಿದ್ದರು. ತಮ್ಮ ಚಿಕ್ಕ ವಯಸ್ಸಿನಲ್ಲೆ ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡರು. ರಾಷ್ಟ್ರಮಟ್ಟದವರೆಗೆ ತನ್ನ ಹೋರಾಟ ಹೆಜ್ಜೆಗುರುತುಗಳನ್ನು ಮೂಡಿಸಿದ್ದರು ಎಂದು ತುಮಕೂರು ರಾಮಕೃಷ್ಣ ಆಶ್ರಮದ ಶ್ರೀ ವಿರೇಶಾನಂದ ಸ್ವಾಮೀಜಿ ಹೇಳಿದರು.
    ನಗರದ ಹುತಾತ್ಮರ ವೀರಸೌಧದಲ್ಲಿ ಶನಿವಾರ ಹುತಾತ್ಮ ಮೈಲಾರ ಮಹದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಯೋಗದಲ್ಲಿ ಹುತಾತ್ಮ ಮೈಲಾರ ಮಹದೇವ, ವೀರಯ್ಯ ಹಿರೇಮಠ ಹಾಗೂ ತಿರಕಪ್ಪ ಮಡಿವಾಳ ಜೀವ ಬಲಿದಾನ ಮಾಡಿದ ಸ್ಮರಣಾರ್ಥ ಆಯೋಜಿಸಿದ್ದ ‘ಹುತಾತ್ಮ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ದಂಡಿಯಾತ್ರೆಯಲ್ಲಿ ಕರ್ನಾಟಕದಿಂದ ಭಾಗವಹಿಸಿದ ಏಕೈಕ ವ್ಯಕ್ತಿ ಮೈಲಾರ ಮಹದೇವಪ್ಪನವರು ಎಂಬುದು ಹೆಮ್ಮೆಯ ವಿಚಾರ. ಇಂತಹ ಮಹಾನುಭಾವರ ಸ್ವಾತಂತ್ರ್ಯ ಚಳವಳಿ, ರಾಷ್ಟ್ರಾಭಿಮಾನ, ತ್ಯಾಗ, ಬಲಿದಾನಗಳನ್ನು ಯುವ ಸಮೂಹಕ್ಕೆ ತಿಳಿಸುವುದು ಅಗತ್ಯವಾಗಿದೆ ಎಂದು ಹೇಳಿದರು.
    ತಹಶೀಲ್ದಾರ್ ಗಿರೀಶ ಸ್ವಾದಿ ಉದ್ಘಾಟನೆ ನೆರವೇರಿಸಿದರು. ರಾಣೇಬೆನ್ನೂರ ರಾಮಕೃಷ್ಣ ಆಶ್ರಮದ ಶ್ರೀ ಪ್ರಕಾಶನಂದ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ, ಎಸ್.ಎಸ್.ಮಹದೇವ, ನರೇಂದ್ರ ಮೈಲಾರ, ಡಾ.ಎಂ.ಬಿ.ದಳಪತಿ, ಪ್ರೊ.ಎ.ಬಿ.ಹಿರೇಮಠ, ಪ್ರೊ.ಮಂಜುನಾಥ ಎಡ್ವರ್, ಬಸವನಗೌಡ ಪಾಟೀಲ, ಜಗದೀಶ ಮಹಾರಾಜ, ಪ್ರೊ.ಜಿ.ಆರ್.ಯರವನತೆಲಿಮಠ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts