More

    ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವನ ಬಂಧನ

    ಹಾವೇರಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಓರ್ವ ಆರೋಪಿಯನ್ನು ಇಲ್ಲಿಯ ಶಹರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
    ತಾಲೂಕಿನ ಆಲದಕಟ್ಟಿ ಗ್ರಾಮದ ಅರುಣ ನಟರಾಜ ಮಲ್ಲನಗೌಡ್ರ (34) ಬಂಧಿತ ಆರೋಪಿ. ಈತನಿಂದ 3510 ರೂ. ನಗದು ಹಾಗೂ 1 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
    ಈತ ನಗರದ ಮೈಲಾರ ಮಹದೇವಪ್ಪ ಸುಭಾಸ ವೃತ್ತದಲ್ಲಿ ಐಪಿಎಲ್ ಬೆಟ್ಟಿಂಗ್ ಆಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts