More

    ಬಿಜೆಪಿಯಿಂದ ಮಹಿಳಾ ಸಬಲೀಕರಣ ಸಾಧ್ಯ; ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೃಷ್ಟಿ ಪಾಟೀಲ ಹೇಳಿಕೆ

    ಹಾವೇರಿ: ಭಾರತೀಯ ಜನತಾ ಪಕ್ಷ ಮಹಿಳೆಯರನ್ನು ಸಮಾನ ದೃಷ್ಟಿಯಿಂದ ನೋಡುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ಬೇರೆ ಯಾವ ಪಕ್ಷಗಳೂ ಮಾಡದಷ್ಟು ಕೆಲಸವನ್ನು ಬಿಜೆಪಿ ಮಾಡಿದೆ. ನಮ್ಮ ಪಕ್ಷದಲ್ಲಿ ಇರುವಷ್ಟು ಮಹಿಳಾ ಕಾರ್ಯಕರ್ತರು ಬೇರೆ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೃಷ್ಠಿ ಪಾಟೀಲ ಹೇಳಿದರು.
    ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಹಿಳಾ ಮೋರ್ಚಾ ಸಭೆಯಲ್ಲಿ ಅವರು ಮಾತನಾಡಿದರು.
    ನಮ್ಮ ಪಕ್ಷ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯರಿಗೆ ಅವಕಾಶ ಕಲ್ಪಿಸಿ ಮಹಿಳೆಯರ ರಾಜಕೀಯ ಭಾಗವಹಿಸುವಿಕೆಗೆ ಅವಕಾಶ ನೀಡುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮಹಿಳೆಯರಿಗೂ ಮತದಾನದ ಪ್ರಮುಖ್ಯತೆ ತಿಳಿಸಿ ಕಾಂಗ್ರೆಸ್ ಪಕ್ಷದ ಸುಳ್ಳು ಭರವಸೆಗೆ ಮನಸೋಲದಂತೆ ತಿಳಿಸಿ ದೇಶದ ಸುಭದ್ರತೆ, ರಕ್ಷಣೆ ಹಾಗೂ ಆರ್ಥಿಕ ಬೆಳವಣಿಗೆಗೆ ಬಿಜೆಪಿಗೆ ಮತ ನೀಡುವಂತೆ ವಿನಂತಿಸಲಾಗುತ್ತದೆ ಎಂದರು.
    ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಶೋಭಾ ನಿಸ್ಸೀಮಗೌಡರ ಮಾತನಾಡಿ, ಲೋಕಸಭಾ ಚುನವಾಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸ್ಪರ್ಧಿಸಲು ಅವಕಾಶ ದೊರತಿದೆ. ಬೊಮ್ಮಾಯಿಯವರು ಹಲವು ಬಾರಿ ಶಾಸಕರಾಗಿ, ವಿ.ಪ ಸದಸ್ಯರಾಗಿ, ಮಂತ್ರಿಗಳಾಗಿ, ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅನುಭವ ಲೋಕಸಭೆ ಚುನಾವಣೆಯಲ್ಲಿ ಸಹಕಾರಿಯಾಗಲಿದೆ ಎಂದರರು.
    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಉಸ್ತುವಾರಿ ಡಾ.ಸಂತೋಷ ಆಲದಕಟ್ಟಿ ಮಾತನಾಡಿ, ಕ್ಷೇತ್ರದಲ್ಲಿ ಸುಮಾರು ಶೇ.50ರಷ್ಟು ಮಹಿಳಾ ಮತದಾರರಿದ್ದು, ಮಹಿಳೆಯರು ಕಡ್ಡಾಯವಾಗಿ ಮತ ಚಲಾಯಿಸುವುದು ಮುಖ್ಯವಾಗಿದೆ. ಬಿಜೆಪಿ ಮಹಿಳಾ ಮೋರ್ಚಾ ತಂಡ ಸಮಾಜದ ಎಲ್ಲ ಸ್ಥರದ ಮಹಿಳೆಯರನ್ನು ಸಂಪರ್ಕಿಸಿ ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ಸಬಲೀಕರಣಕ್ಕೆ ಜಾರಿಗೊಳಿಸಿದ ಯೋಜನೆಗಳನ್ನು ಮನದಟ್ಟು ಮಾಡಬೇಕು ಎಂದು ಹೇಳಿದರು.
    ಸಭೆಯಲ್ಲಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷೆ ಭಾರತಿ ಅಳವಂಡಿ, ದಕ್ಷಣ ಕನ್ನಡ ಉಸ್ತುವಾರಿ ಭಾರತಿ ಜಂಬಗಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಲಲಿತಾ ಗುಂಡೇನಹಳ್ಳಿ, ವಿದ್ಯಾ ಶೆಟ್ಟಿ, ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts