More

    ಹಾವೇರಿಯಲ್ಲಿ ಬೃಹತ್ ಉದ್ಯೋಗ ಮೇಳ 24ರಂದು; ಶರಣಬಸವ ಅಂಗಡಿ ಲಾ ಫರ್ಮ್‌ನಿಂದ ಆಯೋಜನೆ

    ಹಾವೇರಿ: ಶರಣಬಸವ ಅಂಗಡಿ ಲಾ ಫರ್ಮ್, ಹಾವೇರಿ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಹುಕ್ಕೇರಿ ಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ ಹಾಗೂ ವಿವಿಧ ಮಹಿಳಾ ಒಕ್ಕೂಟಗಳು, ಸಂಘ- ಸಂಸ್ಥೆಗಳ ಸಹಯೋಗದೊಂದಿಗೆ ಡಿ.24ರಂದು ಬೆಳಗ್ಗೆ 10 ಗಂಟೆಗೆ ನಗರದ ಹುಕ್ಕೇರಿ ಮಠದ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಶರಣಬಸವ ಅಂಗಡಿ ಲಾ ಫರ್ಮ್ ಚೇರ್ಮನ್, ವಕೀಲ ಶರಣಬಸವ ಅಂಗಡಿ ಹೇಳಿದರು.
    ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 30ಕ್ಕಿಂತ ಹೆಚ್ಚು ಪ್ರತಿಷ್ಠಿತ ದೇಶ- ವಿದೇಶಗಳ ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. ಆಕರ್ಷಕ ಸಂಬಳದೊಂದಿಗೆ ಕನಿಷ್ಠ 5,000 ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. 5ನೇ ತರಗತಿಯಿಂದ ಯಾವುದೇ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಬಹುದು. ಜಿಲ್ಲೆಯ ಕೊಳಗೇರಿ ಪ್ರದೇಶದ ಕುಟುಂಬಗಳು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು. ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮೇಳ ಉದ್ಘಾಟಿಸುವರು ಎಂದರು.
    ಸ್ಥಳೀಯವಾಗಿ ಹಾಗೂ ಸಮೀಪದ ಜಿಲ್ಲೆಗಳಲ್ಲಿ ಹೆಚ್ಚಿನ ಉದ್ಯೋಗಾವಕಾಶ ಕೊಡಿಸಲು ಯತ್ನಿಸಲಾಗುತ್ತಿದೆ. ಮೇಳ ಪೂರ್ಣಗೊಂಡ ನಂತರ ಮುಂದಿನ ಅನುಸರಣಾ ಕಾರ್ಯಗಳನ್ನು ಚಾಚೂ ತಪ್ಪದೆ ಕ್ರಮವಹಿಸಿ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲ ಮಾಡಿಕೊಡಲಾಗುವುದು. ಆಸಕ್ತರು ಇಮೇಲ್[email protected] ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು ಅಥವಾ ನೇರವಾಗಿ ಮೇಳದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶವಿದೆ ಎಂದು ವಿವರಿಸಿದರು.
    ಜಿಲ್ಲಾ ವಾಣಿಜ್ಯೋಧ್ಯಮ ಸಂಸ್ಥೆ ಅಧ್ಯಕ್ಷ ರವಿ ಮೆಣಸಿನಕಾಯಿ ಮಾತನಾಡಿ, ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಾದ್ಯಂತ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಉದ್ಯೋಗ ಹರಸಿ, ಬೆಂಗಳೂರು, ಮುಂಬೈ, ದೆಹಲಿಯತ್ತ ಯುವಜನತೆ ತೆರಳುವ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ 24ರಂದು ಜರುಗುವ ಮೇಳವನ್ನು ಜಿಲ್ಲೆಯ ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
    ಸುದ್ದಿಗೋಷ್ಠಿಯಲ್ಲಿ ಈರಣ್ಣ ಗಾಣಗೇರ, ಅತೀಶ ಪಾಟೀಲ, ಮುತ್ತಣ್ಣ ನವಲಗುಂದ, ಸುನೀಲ ಮೇಧಾವಿ, ವಿಜಯಕುಮಾರ ಬೂದಿಹಾಳ, ಶಿವಣ್ಣ ಜಡಕಣ್ಣವರ, ರಾಜು ಅಂಕಲಿ, ಎಚ್.ಎಂ.ಸೊಪ್ಪಿನ, ವಿಜಯಕುಮಾರ ಮೆಕ್ಕಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts