More

    ಮಕ್ಕಳ ಹಿತಾಸಕ್ತಿ ಕಾಪಾಡಲು ಕೆಲಸ ಮಾಡಬೇಕು; ನ್ಯಾಯಾಧೀಶ ಪುಟ್ಟರಾಜು ಸಲಹೆ

    ಹಾವೇರಿ: ಮಕ್ಕಳ ರಕ್ಷಣೆ ಕಾರ್ಯ ನಿರ್ವಹಿಸುತ್ತಿರುವ ನಾವೆಲ್ಲರೂ ಬಾಲನ್ಯಾಯ ಮಕ್ಕಳ ಪಾಲನೆ ಮತ್ತು ರಕ್ಷಣೆ ಕಾಯ್ದೆ-2015 ಅರಿತುಕೊಂಡು ಮಕ್ಕಳ ಹಿತಾಸಕ್ತಿ ಕಾಪಾಡಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪುಟ್ಟರಾಜು ಹೇಳಿದರು.
    ನಗರದ ಹಳೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯದ ವತಿಯಿಂದ ಟ್ರಾಫಿಕ್ ಪೊಲೀಸ್ ಹಾಗೂ ವಿಶೇಷ ಪೊಲೀಸ್ ಘಟಕ, ನೋಂದಣಾಧಿಕಾರಿಗಳು, ಜನನ ಮತ್ತು ಮರಣ ನೋಂದಣಿ ಕಚೇರಿ ಅಧಿಕಾರಿ ಹಾಗೂ ಸಿಬ್ಬಂದಿಗಾಗಿ ಆಯೋಜಿಸಿದ್ದ ವಾತ್ಸಲ್ಯ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ ತಿದ್ದುಪಡಿ 2021 ಹಾಗೂ ದತ್ತು ನಿಯಮ-2022ರ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
    ಜಿಲ್ಲೆಯಲ್ಲಿ ಅತಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಎಲ್ಲ ಭಾಗೀದಾರರು ಕೈಜೋಡಿಸಿ ಮಕ್ಕಳ ರಕ್ಷಣೆಯಲ್ಲಿ ತೊಡಗಿದರೆ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲು ಸಾಧ್ಯ. ಮಕ್ಕಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
    ಅಧ್ಯಕ್ಷತೆ ವಹಿಸಿದ್ದ ಹಾವೇರಿ ಉಪ ವಿಭಾಗದ ಡಿವೈಎಸ್‌ಪಿ ಗಣೇಶ ಕೆ.ಎಲ್. ಮಾತನಾಡಿ, ಮಕ್ಕಳ ರಕ್ಷಣೆ ಕಾನೂನುಗಳನ್ನು ಅರಿತುಕೊಂಡು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
    ಬೆಂಗಳೂರು ಪೊಲೀಸ್ ಮಹಾ ನಿರ್ದೇಶಕರ ತರಬೇತಿ ಕಚೇರಿಯ ಪೊಲೀಸ್ ತರಬೇತಿದಾರ ರೋಹಿತ ಸಿ.ಜಿ. ಉಪನ್ಯಾಸ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಪ್ರಾಸ್ತಾವಿಕವಾಗಿ ಮಾತನಾಡಿದರು.
    ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ, ಪೊಲೀಸ್ ಸಬ್ ಇನ್ಸಪೆಕ್ಟರ್ ಸಿದ್ಧಾರೂಢ ಬಡಿಗೇರ, ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts