More

    ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕರವೇ ಆಗ್ರಹ

    ಹಾವೇರಿ: ವ್ಯಾಪಾರಿ ಮಳಿಗೆಗಳು, ಮಾಲ್, ಕಂಪನಿಗಳ ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಪದಗಳನ್ನು ಬಳಸಬೇಕು. ಶೇ.60ರಷ್ಟು ಕನ್ನಡ ಇರಲೇಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಂಗಳವಾರ ನಗರದಲ್ಲಿ ಪ್ರತಿಭಟಿಸಲಾಯಿತು.
    ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ‌್ಯಾಲಿ ನಡೆಸಿದ ಕರವೇ ಕಾರ್ಯಕರ್ತರು ನಗರಸಭೆ ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಮ್ಮ ನಿರಂತರ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆಯನ್ನು ಪಡೆದುಕೊಂಡಿದೆ.
    ಇಷ್ಟೆಲ್ಲ ಹೋರಾಟದ ನಂತರ ಈ ಕಾನೂನು ಪರಿಪೂರ್ಣವಾಗಿ ಜಾರಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯೂ ನಮ್ಮ ಮೇಲಿದೆ. ರಾಜ್ಯದ ಕೊನೆಯ ನಾಮಫಲಕ ಕನ್ನಡೀಕರಣಗೊಳ್ಳುವವರೆಗೆ ಕನ್ನಡದಲ್ಲಿನಾಮಫಲಕ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪ್ರತಿಭಟನಾಕಾರರು ಘೋಷಿಸಿದರು.
    ಕರ್ನಾಟಕ ಸರ್ಕಾರ ಈಗ ಜಾರಿಗೆ ತಂದಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕದ ಪ್ರಕಾರ ಎಲ್ಲ ಅಂಗಡಿ ಮುಂಗಟ್ಟುಗಳ ಮೇಲೂ ಕನ್ನಡದ ನಾಮಫಲಕವೇ ಶೇ.60ರಷ್ಟು ಭಾಗ ಇರಬೇಕು. ಕನ್ನಡವೇ ಮೊದಲ ಸ್ಥಾನದಲ್ಲಿರಬೇಕು. ಜಾಹೀರಾತು ಫಲಕಗಳು ಕೂಡ ಕನ್ನಡದಲ್ಲಿರಬೇಕು. ಇದನ್ನು ಎಲ್ಲ ಉದ್ಯಮಿಗಳು, ವ್ಯಾಪಾರಸ್ಥರು ಪಾಲಿಸುವುದು ಕಡ್ಡಾಯವಾಗಿದೆ ಎಂದರು.
    ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶಗೌಡ ಮುದಿಗೌಡ್ರ, ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮೀ ಗುಡಮಿ, ಸಂತೋಷಗೌಡ ಪಾಟೀಲ, ಹಾಲೇಶ ಹಾಲಣ್ಣನವರ, ಪರಶುರಾಮ ಈಳಗೇರ, ಕರಿಯಪ್ಪ ಕೊರವರ, ಪರಮೇಶ ಕಂಬಳಿ, ಬಿ.ಎಚ್.ಬಣಕಾರ, ಹಸನಸಾಬ ಹತ್ತಿಮತ್ತೂರ, ನಾಗರಾಜ ಪೂಜಾರ, ಕನ್ನಪ್ಪ ಮಾಳಪ್ಪನವರ, ಕಾಳಪ್ಪ ಬಡಿಗೇರ, ಮಲ್ಲಿಕಾರ್ಜುನಗೌಡ ಪಾಟೀಲ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts