More

    PHOTOS| ಹಾವೇರಿಯಲ್ಲಿ ಅಕ್ಷರ ಜಾತ್ರೆ: ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆಯ ಫೋಟೋ ಝಲಕ್​ ಇಲ್ಲಿದೆ…

    ಹಾವೇರಿ: ಏಲಕ್ಕಿ ನಾಡು ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇಂದು ಬೆಳಗ್ಗೆ ಸಮ್ಮೇಳನ ನಡೆಯುವ ಮುಖ್ಯ ವೇದಿಕೆ ಎದುರು ಧ್ವಜಾರೋಹಣ ನೆರವೇರಿಸಿ, ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮಾಡಲಾಯಿತು. ಸಮ್ಮೇಳನಾಧ್ಯಕ್ಷ ಡಾ. ದೊಡ್ಡರಂಗೇಗೌಡ ಅವರು ಭುವನೇಶ್ವರಿಗೆ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡರು.

    ಮೆರವಣಿಗೆಯಲ್ಲಿ ಹಾವೇರಿಯ 23 ಕಲಾ ತಂಡಗಳು ಭಾಗಿಯಾಗಿದ್ದವು. ಕೊಪ್ಪಳ, ಗದಗ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರ, ಆಂಧ್ರ ಗಡಿನಾಡು ಘಟಕ, ಹಾಸನ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 102 ಕಲಾ ತಂಡಗಳು ಮೆರವಣಿಗೆಯುದ್ದಕ್ಕೂ ಸಾಗಿದವು.

    ಡೊಳ್ಳು ಕುಣಿತ, ಹಲಿಗೆ ವಾದನ, ದೊಡ್ಡಾಟ ಕುಣಿತ, ಕರಡಿ ಮಜಲು ಮತ್ತು ಚಮವಾದ್ಯ, ಲಂಬಾಣಿ ಕುಣಿತ, ಪುರವಂತಿಕೆ, ರಣಕಹಳೆ, ಗೊಂಬೆ ಕುಣಿತ, ಪೋತರಾಜ ಕುಣಿತ, ಭಜನಾ ಮಂಡಳಿ, ಮಹಿಳಾ ವೀರ ಗಾಸೆ, ಸಂಬಳ ವಾದ್ಯ, ಮೋಜಿನ ಕುಣಿತ, ವೀರಭದ್ರ ಕುಣಿತ ಹೀಗೆ ವಿವಿಧ ಕಲಾ ಪ್ರಕಾರಗಳು ಮೆರವಣಿಗೆಗೆ ಮೆರಗು ನೀಡಿದವು.

    ಸಮ್ಮೇಳನಾಧ್ಯಕ್ಷರ ಮೆರವಣಿಗೆಯ ವರ್ಣರಂಜಿತ ಫೋಟೋಗಳನ್ನು ನೀವಿಲ್ಲಿ ಕಣ್ತುಂಬಿಕೊಳ್ಳಬಹುದು

    ಹಾವೇರಿಯಲ್ಲಿ ಅಕ್ಷರ ಜಾತ್ರೆ: ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭ, ವಿವಿಧ ಜಾನಪದ ಕಲಾ ತಂಡಗಳ ಮೆರಗು

    ನರೇಶ್​ಗೆ ಪೋರ್ನ್​ ವಿಡಿಯೋಗಳನ್ನು ನೋಡುವ ಚಟವಿದೆ: ಗಂಡನ ಮುಖವಾಡ ಕಳಚಿದ 3ನೇ ಪತ್ನಿ ರಮ್ಯಾ

    ಜಲ್ಲಿ ಬಂದ್, ಬದುಕು ಕ್ರಷ್: ನಿರ್ಮಾಣ ಕಾಮಗಾರಿ ಸ್ಥಗಿತ, ಕಾರ್ವಿುಕರಿಗೆ ಸಂಕಷ್ಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts