More

    ಆಪರೇಷನ್ ಹಸ್ತದ ಸುಳಿವು ನೀಡಿದ ಸಲೀಂ ಅಹ್ಮದ್

    ಹಾವೇರಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಬಿಜೆಪಿ, ಜೆಡಿಎಸ್‌ನ ಹಲವು ಮುಖಂಡರು, ಶಾಸಕರು ಮುಂದಾಗಿದ್ದಾರೆ.ಬೆಳಗಾವಿಯ ವಿಧಾನಸಭೆ ಅಧಿವೇಶನದ ಬಳಿಕ ಹಲವರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. ಈ ಮೂಲಕ ಆಪರೇಷನ್ ಹಸ್ತದ ಕುರಿತು ಸುಳಿವು ನೀಡಿದರು.
    ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಪಾಪದ ಕೊಡ ತುಂಬಿತ್ತು. ಹಾಗಾಗಿ, ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗುತ್ತಾರೆ ಎಂದು ಬಿಜೆಪಿಯವರು ಹಗಲು ಗನಸು ಕಾಣುತ್ತಿದ್ದಾರೆ. ನಮಗೆ ಆಪರೇಷನ್ ಹಸ್ತ ಮಾಡಬೇಕು ಅಂತೇನಿಲ್ಲ. ಬಿಜೆಪಿ, ಜೆಡಿಎಸ್‌ನಿಂದ ನೊಂದು ಹಲವರು ಕಾಂಗ್ರೆಸ್ ಸೇರಲು ಆಸೆ ಪಟ್ಟಿದ್ದಾರೆ ಎಂದರು.
    ಸೆಮಿಫೈನಲ್‌ನಲ್ಲಿ ಇಂಡಿಯಾ ಗೆಲುವು
    ಮೊನ್ನೆ ನಡೆದ ಚುನಾವಣೆಯಲ್ಲಿ ನಾಲ್ಕು ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಮಿಜೋರಾಮ್‌ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತದಿಂದ ಜನ ಭ್ರಮನಿರಸನಗೊಂಡಿದ್ದರು. ತೆಲಂಗಾಣದಲ್ಲಿ ಕೆಸಿಆರ್ ಸುಳ್ಳು ಹೇಳಿಕೊಂಡು ಬಂದಿದ್ದಾರೆ. ಇದರಲ್ಲಿ ಇಂಡಿಯಾ ಗೆಲ್ಲುತ್ತದೆ. ಲೋಕಸಭಾ ಚುನಾವಣೆಗೆ ಇದು ಸೆಮಿಫೈನಲ್. ಮುಂದಿನ ಆರು ತಿಂಗಳಲ್ಲಿ ಬಿಜೆಪಿ ಸರ್ಕಾರವನ್ನು ಬೆತ್ತಲೆ ಮಾಡುವ ಕೆಲಸ ಮಾಡುತ್ತೇವೆ. ಹತ್ತು ವರ್ಷದಲ್ಲಿ ಮೋದಿ ಸರ್ಕಾರ ಏನೂ ಮಾಡಿಲ್ಲ. ರಾಜ್ಯಕ್ಕೆ ಬರಬೇಕಾದ ಪರಿಹಾರ ಕೊಡಿಸಲು ರಾಜ್ಯ ಬಿಜೆಪಿಗೆ ಆಗುತ್ತಿಲ್ಲ. ಜನವರಿ ಕೊನೆಯಲ್ಲಿ 28 ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳ ಘೋಷಣೆ ಮಾಡುತ್ತೇವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts