More

  ಹಾವೇರಿ ಜಿಲ್ಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ; ಕೆಆರ್‌ಎಸ್ ಬೈಕ್ ಜಾಥಾದಲ್ಲಿ ರವಿಕೃಷ್ಣಾ ರೆಡ್ಡಿ ಆರೋಪ

  ಹಾವೇರಿ: ಮೈಲಾರ ಮಹದೇವಪ್ಪ ಅವರಂಥ ಕೆಚ್ಚೆದೆಯ ವೀರರು ಜನಿಸಿದ ನಾಡು ಹಾವೇರಿ. ಇಂತಹ ಜಿಲ್ಲೆಯಲ್ಲಿ ಪ್ರಸ್ತುತ ಜಾತಿ ರಾಜಕೀಯ, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದರು.
  ಕೆಆರ್‌ಎಸ್ ಪಕ್ಷದ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಬೈಕ್ ರ‌್ಯಾಲಿ ಬುಧವಾರ ಹಾವೇರಿ ನಗರಕ್ಕೆ ಆಗಮಿಸಿತ್ತು. ನಗರದ ಜಿಲ್ಲಾಸ್ಪತ್ರೆ ಎದುರು ಆಯೋಜಿಸಿದ್ದ ಸಮಾರಂಭದಲ್ಲಿ ರ‌್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟರು, ಅಪ್ರಾಮಾಣಿಕರು, ಅನೈತಿಕ ನಡೆ ಉಳ್ಳವರಿಗೆ ಮಣೆ ಹಾಕುತ್ತಿರುವ ಜೆಸಿಬಿ ಪಕ್ಷಗಳನ್ನು ದೂರ ಇಡಿ. ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ಶ್ರಮಿಸುತ್ತಿರುವ ಕೆಆರ್‌ಎಸ್ ಸೈನಿಕರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
  ಪಕ್ಷದ ಉಪಾಧ್ಯಕ್ಷ ಲಿಂಗೇಗೌಡ ಎಸ್.ಎಚ್., ಪ್ರಧಾನ ಕಾರ್ಯದರ್ಶಿ ದೀಪಕ ಸಿ.ಎನ್., ಕಾರ್ಯದರ್ಶಿ ರಘು ಜಾಣಗೆರೆ, ನರಸಿಂಹಮೂರ್ತಿ, ಮಲ್ಲಿಕಾರ್ಜುನಯ್ಯ ಬಿ.ಎಸ್., ಜಂಟಿ ಕಾರ್ಯದರ್ಶಿ ರಘುಪತಿ ಭಟ್, ಸಂಘಟನಾ ಕಾರ್ಯದರ್ಶಿ ಎಲ್.ಜೀವನ, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ಬೇಂದ್ರೆ, ಜಿಲ್ಲಾ ಕಾರ್ಯದರ್ಶಿ ಚರಣರಾಜ ರೊಡ್ಡನವರ, ಕೃಷ್ಣ ವಿ.ಬಿ., ಚಂದ್ರಶೇಖರ ಮಠದ, ಬಿ.ಜಿ.ಕುಂಬಾರ, ಮಹೇಶ ನಗರಂಗೆರೆ, ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts