More

    ಜಿಲ್ಲೆಯಲ್ಲಿ ಅಕ್ರಮ ದಂಧೆ ಅವ್ಯಾಹತ; ಕೆಆರ್‌ಎಸ್ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಮಾಲತೇಶ ಡಿ.ಜೆ. ಆರೋಪ

    ಹಾವೇರಿ: ಜಿಲ್ಲೆಯಲ್ಲಿ ಅವ್ಯಾಹತವಾಗಿ ಮಟ್ಕಾ, ಇಸ್ಪೀಟ್, ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಕಾನೂನು ಉಲ್ಲಂಘನೆಯಂಥ ಪ್ರಕರಣಗಳು ನಡೆಯುತ್ತಿವೆ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಮಾಲತೇಶ ಡಿ.ಜೆ. ಆರೋಪಿಸಿದರು.
    ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮಟ್ಕಾ, ಇಸ್ಪೀಟ್, ಅಕ್ರಮ ಮರಳು, ಮದ್ಯ ಮಾರಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಈ ಬಗ್ಗೆ ಜಿಲ್ಲಾ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಆರೋಪಿಸಿದರು.
    ಅಕ್ರಮ ದಂಧೆ ಕುರಿತು ಪ್ರಶ್ನಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಅವರ ಮೇಲೆ ಹಲ್ಲೆಯನ್ನೂ ಮಾಡುವಂತಹ ಸ್ಥಿತಿಗೆ ದಂಧೆಕೋರರು ತಲುಪಿದ್ದಾರೆ. ಚಳಗೇರಿ ಟೋಲ್‌ನಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಈ ಹಿಂದೆ ನಡೆದ ಹಲ್ಲೆಯೇ ಇದಕ್ಕೆ ಸಾಕ್ಷಿಯಾಗಿದೆ. ಜಿಲ್ಲೆಯಲ್ಲಿ ಅಕ್ರಮ ಪಟಾಕಿ ಅಂಗಡಿಗಳು ವ್ಯಾಪಿಸಿಕೊಂಡಿವೆ. ಅಕ್ರಮ ಮದ್ಯದಿಂದ ಅನೇಕ ಬಡವರ ಕುಟುಂಬಗಳು ಬೀದಿಪಾಲಾಗಿವೆ. ಈ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಅಕ್ರಮ ದಂಧೆಗಳ ಮೇಲೆ ಪೊಲೀಸರು ಕ್ರಮ ಜರುಗಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಜನಪ್ರತಿನಿಧಿಗಳೂ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
    ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣ ವಿ.ಬಿ., ಹಾವೇರಿ ಜಿಲ್ಲಾಧ್ಯಕ್ಷ ವಿಶ್ವನಾಥ ರೆಡ್ಡಿ, ದಾವಣಗೆರೆ ಜಿಲ್ಲಾಧ್ಯಕ್ಷ ಮಂಜುನಾಥ ಜೆ.ಎಂ., ರಾಜು ಎಂ.ಎಚ್., ಗಂಗಾ ಕೋರಿ, ಚರಣ ರೊಡ್ಡನವರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts