ರಾಣೆಬೆನ್ನೂರ: ಸಾರಿಗೆ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕುಮಾರಪಟ್ಟಣಂ ಬೈಪಾಸ್ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.
ದಾವಣಗೆರೆ ಮೂಲದ ಪ್ರವೀಣ (24) ಮತ್ತು ವಿಜಯ (22) ಮೃತಪಟ್ಟವರು. ಗಂಭೀರವಾಗಿ ಗಾಯಗೊಂಡ ಕೊಟ್ರೇಶ ಅವರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟಿತ್ತು. ಬೈಪಾಸ್‌ನಲ್ಲಿ ಎದುರಿಗೆ ಬರುತ್ತಿದ್ದ ಕಾರು- ಬಸ್ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.