More

  ಅಂಗಡಿ, ವಾಣಿಜ್ಯ ಸಂಸ್ಥೆಗಳ ನೋಂದಣಿ ಕಡ್ಡಾಯ

  ಹಾವೇರಿ: ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ ಅಡಿ ಜಿಲ್ಲೆಯ ಎಲ್ಲ ತಾಲೂಕಿನಲ್ಲಿರುವ ಅಂಗಡಿ ಮತ್ತು ಮತ್ತು ವಾಣಿಜ್ಯ ಸಂಸ್ಥೆಗಳು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ತಿಳಿಸಿದೆ.
  ಈಗಾಗಲೇ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ತಾಲೂಕಿನಲ್ಲಿರುವ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ನೋಂದಣಿ ಮಾಡಿಸಬೇಕು. 15 ದಿನದೊಳಗಾಗಿ ರಾಜ್ಯ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ ಠಿಠಿ://ಡಿಡಿಡಿ.ಛಿಚ್ಟಞಜಿ.ಚ್ಟ್ಞಠಿ.ಜಟ.ಜ್ಞಿ/ಛಿಚ್ಟಞಜಿ/ ಠಿಠಿಜ್ಚಿ/ಟಞಛಿ.ಟ್ಡ ನಿಗದಿತ ಆನ್‌ಲೈನ್ ಮೂಲಕ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಪರಿಶೀಲನೆ ವೇಳೆ ನೋಂದಣಿಯಾಗದಿರುವುದು ಕಂಡು ಬಂದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts