ಹಾವೇರಿ: ಇಲ್ಲಿನ ಮಂಜುನಾಥ ನಗರದಲ್ಲಿ ರಸ್ತೆಬದಿ ಹತ್ತಾರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಕಳ್ಳರಿಬ್ಬರು ಮಹಿಳೆಯೊಬ್ಬರ ಕೊರಳಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದಾರೆ.
ಇಲ್ಲಿನ ಗಣೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ಮುಗಿಸಿ, ಹತ್ತಕ್ಕೂ ಹೆಚ್ಚು ಮಹಿಳೆಯರು ರಸ್ತೆಬದಿಯಲ್ಲಿ ನಡೆದುಕೊಂಡು ಮನೆಗೆ ಹೊರಟಿದ್ದರು. ಈ ವೇಳೆ 25-ರಿಂದ 30 ವರ್ಷದ ಇಬ್ಬರು ಯುವಕರು ಬೈಕ್‌ನಲ್ಲಿ ಬಂದರು. ಹಿಂದೆ ಕುಳಿತಿದ್ದ ಯುವಕ ಏಕಾಏಕಿ ಹರಿಣಾಕ್ಷಿ ಕೊರಡೂರ ಎಂಬುವರ ಕೊರಳಿಗೆ ಕೈಹಾಕಿ 55 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಕ್ಷಣಾರ್ಧದಲ್ಲಿ ಬೈಕ್‌ಮೇಲೆ ಪರಾರಿಯಾಗಿದ್ದಾನೆ. ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.