

ಹಾವೇರಿ: ಹುಕ್ಕೇರಿ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್ ಹಾವೇರಿ ಸಹಯೋಗದಲ್ಲಿ ನಗರದ ಹುಕ್ಕೇರಿ ಮಠದಲ್ಲಿ ಶನಿವಾರ ಆಯೋಜಿಸಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಚಾಲನೆ ನೀಡಿದರು.
235 ಜನರು ಶಿಬಿರದಲ್ಲಿ ಪಾಲ್ಗೊಂಡು ತಪಾಸಣೆ ಮಾಡಿಸಿಕೊಂಡರು. ಇದರಲ್ಲಿ 110 ಜನರು ಉಚಿತ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದರು. ಇವರಿಗೆ ಉಚಿತ ಸಾರಿಗೆ, ಊಟದ ವ್ಯವಸ್ಥೆಯೊಂದಿಗೆ ಚಿಕಿತ್ಸೆ ಕೊಡಿಸಲಾಗುವುದು ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಸುಭಾಸ ಹುಲ್ಯಾಳದ ತಿಳಿಸಿದರು.
ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಕ್ಲಬ್‌ನ ಕಾರ್ಯದರ್ಶಿ ವಿ.ಆರ್.ಹಾವನೂರ, ಖಜಾಂಚಿ ಗಿರೀಶ ಬಣಕಾರ, ಶಿವಬಸಪ್ಪ ಮುಷ್ಠಿ, ಪಿ.ಸಿ.ಹಿರೇಮಠ, ಎ.ಎಚ್.ಕಬ್ಬಿಣಕಂತಿಮಠ, ಎಸ್.ಆರ್.ಮಾಗನೂರ, ಆನಂದ ಅಟವಾಳಗಿ, ಸುಭಾಷ ಹುರಳಿಕೊಪ್ಪಿ, ಇತರರು ಭಾಗವಹಿಸಿದ್ದರು.