More

    ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 39,260 ಪ್ರಕರಣಗಳು ಇತ್ಯರ್ಥ

    ಹಾವೇರಿ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಮಾ.16ರಂದು ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಇತ್ಯರ್ಥಕ್ಕೆ ಗುರುತಿಸಲ್ಪಟ್ಟ 48,373 ಪ್ರಕರಣಗಳಲ್ಲಿ 39,260 ಪ್ರಕರಣಗಳು ಇತ್ಯರ್ಥಗೊಂಡಿವೆ. 28,05,64,798 ರೂ. ಮೊತ್ತದ ರಾಜಿಯಾಗಿದೆ. ಒಂಭತ್ತು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿ ರಾಜಿಮಾಡಿಕೊಂಡು ಒಂದಾಗಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಸಿ.ಸದಾನಂದಸ್ವಾಮಿ ತಿಳಿಸಿದ್ದಾರೆ.
    ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 7,948 ಪ್ರಕರಣಗಳ ಪೈಕಿ 4,138 ಪ್ರಕರಣಗಳು ಇತ್ಯರ್ಥಗೊಂಡಿವೆ. 20,29,89,268 ರೂ. ರಾಜಿಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 38,40,426ಪ್ರಕರಣಗಳಲ್ಲಿ 35,122 ಪ್ರಕರಣಗಳು ಇತ್ಯರ್ಥಗೊಂಡಿದ್ದು, 7,75,75,530 ರೂ. ಮೊತ್ತದ ರಾಜಿಯಾಗಿದೆ.
    ಜಿಲ್ಲಾ, ತಾಲೂಕು ನ್ಯಾಯವಾದಿಗಳ ಸಂಘಗಳು, ಎಲ್ಲ ನ್ಯಾಯಾಧೀಶರು, ಅಭಿಯೋಜನೆ ಇಲಾಖೆ, ಆರಕ್ಷಕ ಇಲಾಖೆಯವರು ಹಾಗೂ ಕಕ್ಷಿಗಾರರ ಸಹಕಾರದೊಂದಿಗೆ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts