More

    ರಾಷ್ಟ್ರೀಯ ಲೋಕ ಅದಾಲತ್ ಸೆ.9ರಂದು

    ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 9ರಂದು ರಾಷ್ಟ್ರೀಯ ಲೋಕ ಅದಾಲತ್ ಜರುಗಲಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ತಿಳಿಸಿದ್ದಾರೆ.
    ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಡಿಡಿಡಿ.ಠ್ಝ.ಚ್ಟ.್ಞಜ್ಚಿ.ಜ್ಞಿ ವೆಬ್‌ಸೈಟ್ ಸಂಪರ್ಕಿಸಲು ಕೋರಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts