More

    ಡಿಡಿಪಿಐ, ಎಸ್‌ಡಿಸಿ ಲೋಕಾಯುಕ್ತ ಬಲೆಗೆ; ನಿವೃತ್ತ ಶಿಕ್ಷಕನಿಂದ ಲಂಚ ಪಡೆಯುತ್ತಿದ್ದಾಗ ದಾಳಿ

    ಹಾವೇರಿ: ಇಲ್ಲಿನ ಡಿಡಿಪಿಐ ಕಚೇರಿಯಲ್ಲಿ ಶುಕ್ರವಾರ ನಿವೃತ್ತ ಶಿಕ್ಷಕರೊಬ್ಬರಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ (ಡಿಡಿಪಿಐ) ಹಾಗೂ ಕಚೇರಿಯ ಸಿಬ್ಬಂದಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
    ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ದ್ವಿತೀಯ ದರ್ಜೆ ಸಹಾಯಕ ದತ್ತಾತ್ರೇಯ ಕುಂಟೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಮತ್ತು ಸಿಬ್ಬಂದಿ.
    ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬವರು ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿ ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು.
    ಇದಕ್ಕಾಗಿ ಡಿಡಿಪಿಐ 7 ಸಾವಿರ ರೂ. ಲಂಚ ಕೇಳಿದ್ದರು. ಈ ಕುರಿತು ಗೌಸ್ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ 7 ಸಾವಿರ ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
    ಮನೆ, ಕಚೇರಿ ಶೋಧ :
    ಡಿಡಿಪಿಐ ಕಚೇರಿ, ಆರೋಪಿತರ ಮನೆಗಳಲ್ಲಿ ಶೋಧ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸದ್ಯ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಡಾ.ಚಂದ್ರಶೇಖರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts