More

    ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಿದ್ಧತೆ; ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅಧ್ಯಕ್ಷತೆಯಲ್ಲಿ ಸಭೆ

    ಹಾವೇರಿ: ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದಲ್ಲಿ ಅ.28ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅಧಿಕಾರಿಗಳಿಗೆ ತಿಳಿಸಿದರು.
    ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಅ.28ರಂದು ಬೆಳಗ್ಗೆ 10 ಗಂಟೆಗೆ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದೆ. ಮಧ್ಯಾಹ್ನ 2 ಗಂಟೆಗೆ ವಾಲ್ಮೀಕಿ ಸಮುದಾಯ ಭವನದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಸಮಾರಂಭದಲ್ಲಿ ವಾಲ್ಮೀಕಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ಎಲ್ಲ ಸಮುದಾಯದವರು, ಅಧಿಕಾರಿಗಳು ಭಾಗವಹಿಸಬೇಕು ಎಂದರು.
    ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯಲ್ಲಿ ಉತ್ತಮ ಕಲಾತಂಡಗಳ ಆಯ್ಕೆ, ಕುಡಿಯುವ ನೀರಿನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಆಮಂತ್ರಣ ಪತ್ರಿಕೆ, ಕಾರ್ಯಕ್ರಮದ ವೇದಿಕೆ, ಆಸನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಯಿತು.
    ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜಾನಾಯ್ಕ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ, ಸಮಾಜದ ಮುಖಂಡರಾದ ರಮೇಶ ಆನವಟ್ಟಿ, ಬಸವರಾಜ ಹಾದಿಮನಿ, ಸೋಮನಗೌಡ ಪಾಟೀಲ, ಸಂಕನಗೌಡ ಪಾಟೀಲ, ಮರಿಯಪ್ಪ, ನಾಗರಾಜ ಬಾರ್ಕಿ, ಮುಂತಾದವರು ಉಪಸ್ಥಿತರಿದ್ದರು.
    ಭವನಕ್ಕೆ ಮೂಲ ಸೌಕರ್ಯದ ಮನವಿ
    ನಗರದಲ್ಲಿ ಜಿಲ್ಲಾ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣವಾಗಿ ಹಲವು ವರ್ಷಗಳೇ ಕಳೆದರೂ ಮೂಲ ಸೌಕರ್ಯಗಳ ಕೊರತೆ ಎದುರಾಗಿದೆ. ಆದ್ಯತೆ ಮೇರೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಸಮಾಜದ ಮುಖಂಡರು ಮನವಿ ಮಾಡಿಕೊಂಡರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts