More

    ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ್ ಜಿಲ್ಲಾ ಪ್ರವಾಸ ನಾಳೆಯಿಂದ

    ಹಾವೇರಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ್ ಅ.9 ಮತ್ತು 10ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
    ಅ.9ರಂದು ಬೆಳಗ್ಗೆ 9 ಗಂಟೆಗೆ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಎಲ್ಲ ತಾಲೂಕು ತಹಶೀಲ್ದಾರರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದೊಂದಿಗೆ ತಾಲೂಕು ಮಟ್ಟದ ಸಮಿತಿಗಳ ರಚನೆ ಮತ್ತು ಅವುಗಳ ಕಾರ್ಯಚಟುವಟಿಕೆ ಕುರಿತು ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 2.30ಕ್ಕೆ ಎಲ್ಲ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಾಸ್ತವ್ಯ ಮಾಡುವರು.
    ಅ.10ರಂದು ಬೆಳಗ್ಗೆ 9 ಗಂಟೆಗೆ ಎಲ್ಲ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‌ಪಿ ಮತ್ತು ಸಿಆರ್‌ಪಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts