More

    ಮಕ್ಕಳೊಂದಿಗೆ ಮಕ್ಕಳಾಗಿ ಬೆರೆಯಬೇಕು; ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಭಾರತಿ ಶೆಟ್ಟರ ಹೇಳಿಕೆ

    ಹಾವೇರಿ: ಮಕ್ಕಳೊಂದಿಗೆ ನಾವು ಮಕ್ಕಳಾಗಿ ಬೆರೆತಾಗ ಮಾತ್ರ ಮಕ್ಕಳಲ್ಲಿನ ಕಲೆ ಗುರುತಿಸಲು ಸಾಧ್ಯ ಎಂದು ಧಾರವಾಡ ಬಾಲವಿಕಾಸ ಅಕಾಡೆಮಿ ಯೋಜನಾ ನಿರ್ದೇಶಕಿ ಭಾರತಿ ಶೆಟ್ಟರ ಹೇಳಿದರು.
    ನಗರದ ಗೆಳೆಯರ ಬಳಗ ಸಭಾಭವನದಲ್ಲಿ ಇತ್ತೀಚೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಸಕ್ರಿಯವಾಗಿ ಭಾಗವಹಿಸಬೇಕು. ಇದರಿಂದ ಮುಕ್ತವಾಗಿ ಮಕ್ಕಳು ಬೆರೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
    ಅಧ್ಯಕ್ಷತೆ ವಹಿಸಿದ್ದ ಜಿ.ಪಂ. ಉಪಕಾರ್ಯದರ್ಶಿ ಸೋಮಶೇಖರ ಮುಳ್ಳಳ್ಳಿ ಮಾತನಾಡಿ, ಮಕ್ಕಳ ಹಬ್ಬ ಸಮಾರಂಭದಿಂದ ಸುಂದರವಾದ ವಾತಾವರಣ ನಿರ್ಮಾಣವಾಗಿದೆ. ಮಕ್ಕಳು ಹೆಚ್ಚಿನ ಉತ್ಸಾಹದಿಂದ ಭಾಗವಹಿಸಿದಾಗ ಮಾತ್ರ ಒಳ್ಳೆಯ ಪ್ರತಿಭೆಯ ಅನಾವರಣಗೊಳ್ಳುತ್ತದೆ ಎಂದು ಹೇಳಿದರು.
    ಕಾರ್ಯಕ್ರಮದಲ್ಲಿ ಸಂಗೀತ, ಚಿತ್ರಕಲೆ, ಕ್ಲೇ ಮಾಡೆಲಿಂಗ್, ಜಾನಪದ ನೃತ್ಯ, ನಾಟಕ ಪ್ರದರ್ಶನ, ಡೊಳ್ಳು ಕುಣಿತ, ಕಂಸಾಳೆ ಚಟುವಟಿಕೆಗಳು ಜರುಗಿದವು. ವಿಜೇತ ಮಕ್ಕಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. ಭಾಗಿಯಾದ ಎಲ್ಲ ಮಕ್ಕಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
    ಜಿಲ್ಲಾ ನಿರೂಪಣಾಧಿಕಾರಿ ಅಣ್ಣಪ್ಪ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್.ಎಚ್.ಮಜೀದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ.ಚಿನ್ನಿಕಟ್ಟಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮೀ ಪಾಟೀಲ, ಪರಿವಿಕ್ಷಣಾಧಿಕಾರಿ ಮುನೀಶ್ವರ ಚೂರಿ, ಧಾರವಾಡ ಬಾಲವಿಕಾಸ ಅಕಾಡೆಮಿ ಅಧಿಕಾರಿ ದೀಪಾ ಜಾವುರ, ಜಿಲ್ಲಾ ಬಾಲವಿಕಾಸ ಅನುಷ್ಠಾನ ಸಮಿತಿಯ ನಾಮನಿರ್ದೇಶಿತ ಸದಸ್ಯ ಪ್ರಕಾಶಗೌಡ ಗಡಿಯಪ್ಪಗೌಡ್ರ, ಸಿ.ಎಫ್.ಮೂಲಿಮನಿ, ಇತರರು ಉಪಸ್ಥಿತರಿದ್ದರು.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ ಸ್ವಾಗತಿಸಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ ವಂದಿಸಿದರು. ಸೋಮನಗೌಡ ಗಾಳಿಗೌಡ್ರ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts