More

    ಮತದಾರರ ಪಟ್ಟಿ ಸೇರ್ಪಡೆ, ತಿದ್ದುಪಡಿಗೆ ಅವಕಾಶ

    ಹಾವೇರಿ: ವಿಧಾನಸಭಾ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024, ಅರ್ಹತಾ ದಿನಾಂಕ 01-01-2024ಕ್ಕೆ ಸಂಬಂಧಿಸಿದಂತೆ 27-10-2023ರಂದು ಹಾವೇರಿ ಜಿಲ್ಲೆಯಾದ್ಯಂತ ಎಲ್ಲ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ, ತಹಶೀಲ್ದಾರ್, ಉಪ ವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.
    ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಕರಡು ಮತದಾರರ ಪಟ್ಟಿಗಳಲ್ಲಿ ಸಾರ್ವಜನಿಕರು ತಮ್ಮ ಹೆಸರು ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಒಂದು ವೇಳೆ ಅರ್ಹತಾ ದಿನಾಂಕಕ್ಕೆ ಸಂಬಂಧಿಸಿದಂತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-6ರಲ್ಲಿ, ಹೆಸರು ಕಡಿಮೆಗೊಳಿಸಲು ನಮೂನೆ-7ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಮತ್ತು ಹೆಸರು ವರ್ಗಾವಣೆ ಬಯಸಿದ್ದಲ್ಲಿ ನಮೂನೆ-8ರಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಂಬಂಧಪಟ್ಟ ಮತಗಟ್ಟೆ ಅಧಿಕಾರಿ (ಬಿಎಲ್‌ಓ)ಗೆ ಚುನಾವಣಾ ವೇಳಾಪಟ್ಟಿಯಂತೆ ದಿನಾಂಕ 27-10-2023ರಿಂದ 09-12-2023ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
    ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ದಿನಾಂಕ 26-12-2023 ರಂದು ಕಾಲೋಚಿತಗೊಳಿಸಲಾಗುವುದು. ನಂತರ ಅಂತಿಮ ಮತದಾರರ ಪಟ್ಟಿಯನ್ನು ದಿನಾಂಕ 05-01-2024ರಂದು ಜಿಲ್ಲೆಯಾದ್ಯಂತ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts