More

    ಜಿಲ್ಲಾ ಕಾರ್ಯಕ್ರಮ ಸಂಯೋಜಕ, ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

    ಹಾವೇರಿ: ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಒಂದು ಹಾಗೂ ಜಿಲ್ಲಾ ಕಾರ್ಯಕ್ರಮ ಸಹಾಯಕ ಒಂದು ಹುದ್ದೆಗಳಿಗೆ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
    ಅಭ್ಯರ್ಥಿಯು 21ರಿಂದ 45 ವರ್ಷದೊಳಗಿರಬೇಕು. ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಮೇಲಾಧಿಕಾರಿಗಳ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಲು ಬದ್ಧರಾಗಿರಬೇಕು. ಕಾಲ ಕಾಲಕ್ಕೆ ಕಾರ್ಯಾಗಾರ, ತರಬೇತಿಗಳಿಗಾಗಿ ಅದೀನ ಕಚೇರಿಗಳಿಗೆ ಬೆಂಗಳೂರು ಹಾಗೂ ದೆಹಲಿಗೆ ಪ್ರಯಾಣಿಸಲು ಸಿದ್ಧರಿರಬೇಕು. ಜಿಲ್ಲಾಡಳಿತ ಹಾಗೂ ಈ ಕಚೇರಿಯಿಂದ ಹೊರಡಿಸಿರುವ ನಿಬಂಧನೆಗಳು ಮತ್ತು ಷರತ್ತುಗಳಿಗೆ ಭದ್ದರಾಗಿರಬೇಕು. ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆ ಟಾಸ್ಕ್ ಫೊರ್ಸ್ ಸಮಿತಿ ನಿರ್ಣಯವೇ ಅಂತಿಮವಾಗಿರುತ್ತದೆ.
    ಜಿಲ್ಲೆಯ ಸ್ಥಳೀಯ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಒಂದು ವೇಳೆ ಸ್ಥಳೀಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಬೇರೆ ಜಿಲ್ಲೆಯ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.
    ನಿಗದಿತ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನವುಳ್ಳ ಸ್ಥಳೀಯ ಅರ್ಹ ಅಭ್ಯರ್ಥಿಗಳು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾವೇರಿ ಈ ವಿಳಾಸದಲ್ಲಿ ಅರ್ಜಿ ನಮೂನೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿ.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts