ಹಾವೇರಿ: ಭೂಮಿ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿ ಮರವಾಗಿ ಬೆಳೆಸಬೇಕು ಎಂದು ಮುಖ್ಯೋಪಾಧ್ಯಾಯ ವೀರೇಶ ಗಡ್ಡದೇವರಮಠ ಹೇಳಿದರು.
ತಾಲೂಕಿನ ಮೇವುಂಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದು ನೆಟ್ಟ ಸಸಿಗಳು ಮರವಾಗಿ ಬೆಳೆಸಲು ಎಲ್ಲರೂ ಸಂಕಲ್ಪ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಶಿಕ್ಷಕ ಡಿ.ಎಸ್.ರಿತ್ತಿ ಪರಿಸರ ಜಾಗೃತಿ ಗೀತೆ ಹಾಡುವ ಮೂಲಕ ಪರಿಸರದ ನಾಶದಿಂದಾಗುವ ಹಾನಿಯ ಬಗ್ಗೆ ಹಾಗೂ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು. ಶಿಕ್ಷಕಿ ಸುಜಾತಾ ಕಡಕೋಳ ಪರಿಸರ ಸಂರಕ್ಷಣೆ ಕುರಿತು ಮಾತನಾಡಿದರು.
ಅರಣ್ಯ ಇಲಾಖೆಯಿಂದ ಸುಮಾರು 50 ವಿವಿಧ ಸಸಿಗಳನ್ನು ಪಡೆದು ನೆಟ್ಟು, ಪರಿಸರದ ರಕ್ಷಣೆಯ ಮಹತ್ವದ ಕುರಿತು ಮಕ್ಕಳಿಗೆ ಅರಿವು ಮೂಡಿಸಲಾಯಿತು.
ಶಿಕ್ಷಕ ಬಸವರಾಜ ಪೂಜಾರ ನಿರೂಪಿಸಿದರು, ಶಿಕ್ಷಕರಾದ ಮಂಜುನಾಥ ಕೆಂಚಮಲ್ಲ, ಸಚಿನ ವಾಲ್ಮೀಕಿ, ಪ್ರದೀಪ ಬಿಜಾಪೂರ, ಶಿಕ್ಷಕಿಯರಾದ ಸವಿತಾ ಗೊಲ್ಲರ, ನೀಲಮ್ಮ ದೊಡ್ಡಗೌಡರ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮೇವುಂಡಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
You Might Also Like
ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips
ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…
ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…
ಬೆಂಗಳೂರು: ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…
ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower
ಬೆಂಗಳೂರು: ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…