More

    ಜಂಗಮನಕೊಪ್ಪ ಯುಎಚ್‌ಟಿ ಹಾಲು ಪ್ಯಾಕಿಂಗ್ ಘಟಕ ಉದ್ಘಾಟನೆ ಇಂದು

    ಹಾವೇರಿ: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ತಾಲೂಕಿನ ಜಂಗಮನಕೊಪ್ಪ ಗ್ರಾಮದಲ್ಲಿ ಸ್ಥಾಪಿಸಿರುವ ಯುಎಚ್‌ಟಿ ಹಾಲು ಪ್ಯಾಕಿಂಗ್ ಸ್ಥಾವರ ಹಾಗೂ ಹಾಲು ಸ್ಯಾಚೆಟ್ ಪ್ಯಾಕಿಂಗ್ ಘಟಕವನ್ನು ಮಾ.10ರಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ ತಿಳಿಸಿದರು.
    ನಗರದ ಹಾವೇರಿ ಹಾಲು ಒಕ್ಕೂಟದ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟ ಹಾಗೂ ಎಸ್‌ಕೆಎ ಪುಡ್ಸ್ ಸ್ಪೆಶಾಲಿಟಿ ವತಿಯಿಂದ ರಾಜ್ಯ ಸರ್ಕಾರದ ಪಿಪಿಪಿ ಯೋಜನೆಯಡಿ 110 ಕೋಟಿ ರೂ. ವೆಚ್ಚದಲ್ಲಿ ಯುಎಚ್‌ಟಿ ಹಾಲು ಪ್ಯಾಕಿಂಗ್ ಸ್ಥಾವರ ಮತ್ತು ಹಾಲು ಸ್ಯಾಚೆಟ್ ಪ್ಯಾಕಿಂಗ್ ಘಟಕ ನಿರ್ಮಿಸಲಾಗಿದೆ. ಕಳೆದ 10 ವರ್ಷದ ಹೋರಾಟದ ಫಲವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸಕ್ತಿಯಿಂದ ಹಾವೇರಿ ಹಾಲು ಒಕ್ಕೂಟ, ನೂತನ ಘಟಕಗಳು ಸ್ಥಾಪನೆಯಾಗಿವೆ. ಈ ಘಟಕ ಸ್ಥಾಪನೆಗೆ ಕಾರಣೀಕರ್ತರಾದ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಉದ್ಘಾಟಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts