ಲೋಕಸಭೆ ಸ್ಪರ್ಧೆ ಕುರಿತು ಚರ್ಚೆಯಾಗಿಲ್ಲ; ಸಚಿವ ಎಚ್.ಕೆ.ಪಾಟೀಲ ಹೇಳಿಕೆ

HK Patil
Published on

ಹಾವೇರಿ: ಹಾವೇರಿ- ಗದಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್.ಕೆ.ಪಾಟೀಲ ಸ್ಪರ್ಧೆ ವಿಚಾರವನ್ನು ಮಾಧ್ಯಮಗಳಿಂದಲೇ ಕೇಳುತ್ತಿದ್ದೇನೆ. ಈ ಬಗ್ಗೆ ಪಕ್ಷದ ವೇದಿಕೆಯಲ್ಲಿ ಇನ್ನೂ ಚರ್ಚೆಯಾಗಿಲ್ಲ. ನನಗೂ ಯಾರೂ ಕೇಳಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.
ತಾಲೂಕಿನ ಅಗಡಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಸಚಿವರನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಬೊಮ್ಮಾಯಿ ಕೇಳಿ ಹೈಕಮಾಂಡ್ ಚರ್ಚಿಸಲ್ಲ. ಅದನ್ನು ಮೊದಲು ಅವರು ತಿಳಿದುಕೊಳ್ಳಬೇಕು. ಹೈಕಮಾಂಡ್ ಹೇಳಿದರೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನಗೆ ಉತ್ತರಿಸಿದ ಅವರು, ಆ ಪ್ರಶ್ನೆ ಬಂದಾಗ ವಿಚಾರ ಮಾಡೋಣ ಎಂದರು.
ಲೋಕಸಭಾ ಚುನಾವಣೆಗೂ ಮೊದಲೇ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುವುದಾಗಿ ಬಿಜೆಪಿಯವರು ಹೇಳುತ್ತಿದ್ದಾರೆ. ಮೊದಲು ಅವರು ರಾಜಕೀಯ ನಿಲುವು ತೆಗೆದುಕೊಂಡು ಘೋಷಿಸಲಿ. ನಂತರ ಪ್ರತಿಕ್ರಿಯೆ ಕೊಡೋಣ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net