17.97 ಕೋಟಿ ರೂ. ಅಂದಾಜು ಹಾನಿ; ಸತತ ಮಳೆಗೆ ರಸ್ತೆ, ಸೇತುವೆ, ಶಾಲೆ, ಅಂಗನವಾಡಿ ಕೊಠಡಿಗೆ ಹಾಳು; ಸಚಿವ ಶಿವಾನಂದ ಪಾಟೀಲ ಹೇಳಿಕೆ

ಹಾವೇರಿ: ಕಳೆದ ವರ್ಷ ಅನಾವೃಷ್ಠಿ, ಈ ವರ್ಷ ಅತಿವೃಷ್ಠಿಯಿಂದ ಬಳಲುತ್ತಿದ್ದು, ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲೆ, ಅಂಗನವಾಡಿ ಕಟ್ಟಡ, ರಸ್ತೆ, ಸೇತುವೆ, ಸೇರಿದಂತೆ 17.97 ಕೋಟಿ ರೂ. ಮೌಲ್ಯದ ಮೂಲ ಸೌಕರ್ಯ ಹಾನಿಗೀಡಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಬುಧವಾರ ಭೇಟಿ ನೀಡಿದ ಅವರು ಮಳೆಹಾನಿ, ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲಿಸಿದ ನಂತರ ಹಾನಗಲ್ಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಳೆಗೆ ಜಿಲ್ಲೆಯಾದ್ಯಂತ 634 ಶಾಲಾ ಕೊಠಡಿ ಹಾಗೂ 84 ಅಂಗನವಾಡಿ ಕಟ್ಟಡಗಳು ಹಾಳಾಗಿವೆ. 0.70 ಕಿಮೀ ರಾಜ್ಯ ಹೆದ್ದಾರಿ, 18.70 ಮುಖ್ಯ ಜಿಲ್ಲಾರಸ್ತೆ, 3 ಸೇತುವೆಗಳು, 51 ಕಿಮೀ ಗ್ರಾಮೀಣ ರಸ್ತೆ, 1 ಕೆರೆ, 5 ಸಣ್ಣ ಸೇತುವೆಗಳು, 339 ವಿದ್ಯುತ್ ಕಂಬಗಳು,18 ಟ್ರಾನ್ಸ್‌ಫಾರ್ಮರ್, ವಿದ್ಯುತ್ ತಂತಿ ಸೇರಿದಂತೆ 17.87 ಕೋಟಿ ರೂ. ಮೌಲ್ಯದ ಮೂಲಸೌಕರ್ಯದ ಆಸ್ತಿ ಹಾನಿಗೀಡಾಗಿದೆ. ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ಇದಕ್ಕೆ 15.26 ಕೋಟಿ ರೂ. ಸಹಾಯಧನ ಸಿಗಲಿದೆ ಎಂದು ತಿಳಿಸಿದರು.
ಹಾನಗಲ್ಲ ಮತ್ತು ಶಿಗ್ಗಾಂವಿ ತಾಲೂಕಿನಲ್ಲಿ ಹೆಚ್ಚಿನ ಮಳೆ ಅನಾಹುತ ಸಂಭವಿಸಿದೆ. ಮಳೆಗೆ ಜಿಲ್ಲೆಯಲ್ಲಿ ಸಾಕಷ್ಟು ಜೀವಹಾನಿ, ಬೆಳೆ ಹಾನಿಯಾಗಿದೆ. ಮೃತರ ಕುಟುಂಬದವರಿಗೆ ಪರಿಹಾರ ಕೊಡಲಾಗಿದೆ. ಶೇ.53ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ಇನ್ನೂ ಹಲವು ಗ್ರಾಮಗಳಲ್ಲಿ ಕೆಲ ಶಿಥಿಲಾವಸ್ಥೆಯ ಮನೆಗಳಲ್ಲೇ ಜನ ವಾಸವಾಗಿರುವ ದೂರು ಬಂದಿದ್ದು, ಮತ್ತೊಮ್ಮೆ ಸಮೀಕ್ಷೆ ನಡೆಸಲು ಪಿಡಿಒಗಳಿಗೆ ಸೂಚಿಸುವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಶ್ರೀನಿವಾಸ ಮಾನೆ, ಆನಂದಸ್ವಾಮಿ ಗಡ್ಡದೇವರಮಠ, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಜಿಪಂ ಸಿಇಒ ಅಕ್ಷಯ ಶ್ರೀಧರ, ಇತರರಿದ್ದರು.

ಮನೆ ಕಟ್ಟಿಸಿಕೊಡುವ ಬಗ್ಗೆ ಸಿಎಂ ಜತೆ ಚರ್ಚೆ
ಜಿಲ್ಲೆಯಲ್ಲಿ ಈವರೆಗೆ ಮಳೆಗೆ 1,460 ಮನೆಗಳು ಡ್ಯಾಮೇಜ್ ಆಗಿವೆ. 5 ಮನೆ ಸಂಪೂರ್ಣ ಹಾಳಾಗಿದ್ದು, 11 ಮನೆ ತೀವ್ರಹಾನಿ ಹಾಗೂ 1,444 ಮನೆಗಳಿಗೆ ಭಾಗಶಃ ಹಾನಿಗೊಳಗಾಗಿವೆ. ಹಿಂದಿನ ಸರ್ಕಾರ ಮನೆಹಾನಿಗೆ ಐದು ಲಕ್ಷ ರೂ. ಕೊಟ್ಟಿದ್ದರು. ಅದರಲ್ಲಿ ದುರುಪಯೋಗ ಆಗಿತ್ತು. ಹಾಗೆ ಆಗಬಾರದು ಎಂಬ ನಿಟ್ಟಿನಲ್ಲಿ ಸರ್ಕಾರದಿಂದಲೇ ಮನೆ ಕಟ್ಟಿಸಿಕೊಡುವ ಚಿಂತನೆ ಇದ್ದು, ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಸಚಿವ ಪಾಟೀಲ ಹೇಳಿದರು.

ತಹಸೀಲ್ದಾರ್ ಕಚೇರಿ ಸ್ಥಳಾಂತರಕ್ಕೆ ಕ್ರಮ
ಹಾವೇರಿ ತಹಸೀಲ್ದಾರ್ ಕಚೇರಿ ಸೋರಿಕೆ ಹಿನ್ನೆಲೆಯಲ್ಲಿ ಹಳೆಯ ಎಸ್‌ಪಿ ಕಚೇರಿಗೆ ಸ್ಥಳಾಂತರಿಸುವ ಚಿಂತನೆ ನಡೆದಿದೆ. ಈ ಕುರಿತು ಎಸ್‌ಪಿ ಅವರ ಜತೆಗೆ ಮಾತನಾಡಿದ್ದೇನೆ. ಸರ್ಕಾರದಿಂದ ಸೂಚನೆ ಬಂದ ಕೂಡಲೇ ಸ್ಥಳಾಂತರಿಸಲಾಗುವುದು. ಹಾವೇರಿ 24/7 ಕುಡಿಯುವ ನೀರಿನ ಕಾಮಗಾರಿಯ 30 ಕೋಟಿ ರೂ. ಏನಾಯ್ತು ಎಲ್ಲಿ ಹೋಯ್ತು ? ಎಂಬ ಕುರಿತು ವರದಿ ಕೇಳಿದ್ದು, ವರದಿ ಬಂದ ಕೂಡಲೇ ಕ್ರಮ ಜರುಗಿಸಲಾಗುವುದು ಎಂದು ಶಿವಾನಂದ ಪಾಟೀಲ ಹೇಳಿದರು.

ಅಕ್ಟೋಬರ್‌ನಲ್ಲಿ ಎಂವಿಎಸ್ ಪೂರ್ಣ
ಹಾನಗಲ್ಲ ತಾಲೂಕಿನ ಬಾಳಂಬೀಡ, ಸವಣೂರ ತಾಲೂಕಿನ ಕುಣಿಮೆಳ್ಳಿಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವಾನಂದ ಪಾಟೀಲರು, ತಡಸ, ಹಂಸಭಾವಿ ಹಾಗೂ ಆಣೂರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು (ಎಂವಿಎಸ್) ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ನಂತರದಲ್ಲಿ 440 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದರು.

7.31 ಕೋಟಿ ರೂ. ಬೆಳೆ ನಷ್ಟ
ಮಳೆ ಮತ್ತು ನದಿಗಳ ಪ್ರವಾಹದಿಂದಾಗಿ ಜಿಲ್ಲೆಯಲ್ಲಿ 2.80 ಕೋಟಿ ರೂ. ಕೃಷಿ ಬೆಳೆ ಹಾಗೂ 4.51 ಕೋಟಿ ರೂ. ತೋಟಗಾರಿಕೆ ಬೆಳೆ ಸೇರಿ 7.31 ಕೋಟಿ ರೂ. ಮೌಲ್ಯದ ಬೆಳೆ ಹಾನಿಗೀಡಾಗಿದೆ ಎಂದು ಅಂದಾಜಿಸಲಾಗಿದೆ. ನದಿಪಾತ್ರದ ಜಮೀನುಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಬಳಿಕ ಸಮೀಕ್ಷೆ ನಡೆಸಿ ಅಂತಿಮ ವರದಿ ಸಲ್ಲಿಸಲಾಗುವುದು. ಕೃಷಿ ಬೆಳೆಗೆ 2.80 ಕೋಟಿ ರೂ. ಹಾಗೂ ತೋಟಗಾರಿಕೆ ಬೆಳೆಗೆ ಅಂದಾಜು 72 ಲಕ್ಷ ರೂ. ಎನ್‌ಡಿಆರ್‌ಎಫ್ ಪರಿಹಾರ ಸಿಗಲಿದೆ ಎಂದು ಸಚಿವರು ಹೇಳಿದರು.

Share This Article

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…

ನೀವಿದನ್ನು ನಿತ್ಯವೂ ಚಾಚೂ ತಪ್ಪದೇ ಅನುಸರಿಸಿದರೆ ನೀವು ಖಂಡಿತ ಶ್ರೀಮಂತರಾಗ್ತೀರಿ! Rich Person

ಇಂದು ಪ್ರತಿಯೊಬ್ಬರು ಶ್ರೀಮಂತರಾಗಲು ( Rich Person ) ಬಯಸುತ್ತಾರೆ. ತಾವು ದುಡಿದ ಹಣವನ್ನು ಸರಿಯಾದ…